ಮಂಜೇಶ್ವರ : ಊರಿನ ಹೆಮ್ಮೆಯ ಪ್ರತೀಕವಾದ ಶಾಲೆಗೆ ರಕ್ಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಊರವರ ಸಹಕಾರವೊಂದಿದ್ದರೆ ಪ್ರತೀ ಕಾರ್ಯಕ್ರಮವೂ ಯಶಸ್ವಿಯಾಗುವುದು. ಶಾಲೆಯು ಅಭಿವೃದ್ಧಿ ಹೊಂದುವುದು ಎಂಬುವುದಕ್ಕೆ ಸಾಕ್ಷಿಯಾಗಿ ಈ ವರ್ಷವೂ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಯಶಸ್ವಿಯಾಗಿ ನಡೆಯಿತು.
ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ ಬೆಳಿಗ್ಗೆ ಧ್ವಜಾರೋಹಣಗೈಯುವ ಮೂಲಕ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೆÇಯ್ಯೆಲ್, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಿ ಶುಭ ಹಾರೈಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಅಪರಾಹ್ನ ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಊರವರಿಗೆ ಕ್ರೀಡಾಕೂಟ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭವನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೀಂಜ ಗ್ರಾಮ ಪಂಚಾಯತಿ ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ, ವಾರ್ಡ್ ಸದಸ್ಯ ಜನಾರ್ದನ ಪೂಜಾರಿ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಮಾತೃ ಸಂಘದ ಅಧ್ಯಕ್ಷೆ ಪ್ರಫುಲ್ಲ ವೈ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ನಾರಾಯಣ ನಾೈಕ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೆÇಯ್ಯೆಲ್, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ನಯನ ಎಂ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ವರದಿ ವಾಚಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಕ್ಕಳ ಕ್ರೀಡಾಕೂಟ ಹಾಗೂ ಊರವರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಶಾಲಾ ಶಿಕ್ಷಕಿ ಅಶ್ವಿನಿ ಎಂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಶಾಲಾ ಮಕ್ಕಳಿಗೆ ಬಹುಮಾನದ ಪ್ರಾಯೋಜಕ ಬಾಲಕೃಷ್ಣ ಶೆಟ್ಟಿ ಪೆÇಯ್ಯೆಲ್ ಅವರನ್ನು ಸ್ಮರಣಿಕೆ ನೀಡಿ ಅಭಿನಂದಿಸಿದರು. ಶಾಲಾ ವಿದ್ಯಾರ್ಥಿ ಸಯ್ಯದ್ ಮೊಹಮ್ಮದ್ ಇಶಾನ್ ಶಾಲೆಗೆ ಸ್ಮರಣಿಕೆಯನ್ನು ನೀಡುವ ಮೂಲಕ ಗಮನ ಸೆಳೆದನು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಶಾಲಾ ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.




