ಬದಿಯಡ್ಕ: ಶ್ರೀಮದ್ ಎಡನೀರು ಮಠದಲ್ಲಿ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಸಂಪಾಜೆ ಇವರು ಸೇವಾ ರೂಪದಲ್ಲಿ ಸಮರ್ಪಿಸಲಿರುವ ನೂತನ ಗುರು ಭವನದ ಭೂಮಿಪೂಜಾ ಸಮಾರಂಭ ಇಂದು(ಗುರುವಾರ) ಬೆಳಿಗ್ಗೆ 11.15 ರಿಂದ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
ಶೃಂಗೇರಿ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಪದ್ಮಶ್ರೀ ಡಾ.ವಿ.ಆರ್.ಗೌರೀಶಂಕರ್ ಭೂಮಿಪೂಜೆ ನಡೆಯಲಿದೆ. ಕಾಸರಗೋಡು ಸಂಸದ ರಾಜಮೋಹನ ಉಣ್ಣಿತ್ತಾನ್ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ, ಕನಾರ್|ಟಕ ಸರ್ಕಾರದ ಮಾಜೀ ಅಡ್ವಕೇಟ್ ಜನರಲ್ ಅಶೋಕ ಹಾರನಹಳ್ಳಿ ವಿಶೇಷ ಅಭ್ಯಾಗತರಾಗಿ ಉಪಸ್ಥಿತರಿರುವರು.





