HEALTH TIPS

ಕ್ಯಾಸಿನೊ, ಕುದುರೆ ರೇಸ್, ಆನ್‌ಲೈನ್ ಆಟಕ್ಕೆ ಶೇ 28 ತೆರಿಗೆ

           ನವದೆಹಲಿ ಕ್ಯಾಸಿನೊಗಳು, ಕುದುರೆ ರೇಸ್ ಮತ್ತು ಆನ್‌ಲೈನ್‌ ಆಟಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯ (ಜಿಎಸ್‌ಟಿ) ಅಡಿಯಲ್ಲಿ ಶೇಕಡ 28ರಷ್ಟು ತೆರಿಗೆ ವಿಧಿಸಲು ಸಚಿವರ ಸಮಿತಿಯು ಶಿಫಾರಸು ಮಾಡಿದೆ. ಸಮಿತಿಯ ವರದಿಯನ್ನು ಜಿಎಸ್‌ಟಿ ಮಂಡಳಿಯ ಮುಂಬರುವ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ.

           ಕ್ಯಾಸಿನೊ, ಕುದುರೆ ರೇಸ್ ಹಾಗೂ ಆನ್‌ಲೈನ್ ಆಟಗಳ ಮೇಲೆ ಎಷ್ಟು ತೆರಿಗೆ ವಿಧಿಸಬೇಕು ಎಂಬುದನ್ನು ಪರಿಶೀಲಿಸಲು ಮೇಘಾಲಯದ ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

           ಸಮಿತಿಯ ವರದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಇನ್ನು ಒಂದೆರಡು ದಿನಗಳಲ್ಲಿ ಸಲ್ಲಿಸಲಾಗುತ್ತದೆ ಎಂದು ಸಂಗ್ಮಾ ಅವರು ಟ್ವೀಟ್ ಮಾಡಿದ್ದಾರೆ. ಈಗಿನ ನಿಯಮಗಳ ಅನ್ವಯ ಕ್ಯಾಸಿನೊ, ಕುದುರೆ ರೇಸ್ ಹಾಗೂ ಆನ್‌ಲೈನ್ ಆಟಗಳಿಗೆ ಶೇ 18ರಷ್ಟು ತೆರಿಗೆ ವಿಧಿಸಲಾಗುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries