HEALTH TIPS

34 ವರ್ಷಗಳ ನಂತರ ಒಂದು ವರ್ಷ ಜೈಲು ಶಿಕ್ಷೆ: "ಕಾನೂನಿಗೆ ಶರಣು" ಎಂದ ಸಿಧು

            ಚಂಡೀಗಢ1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

            ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು, "ಘನ ನ್ಯಾಯಾಲಯದ ತೀರ್ಪಿಗೆ ತಲೆ ಬಾಗುವುದಾಗಿ" ತಿಳಿಸಿದ್ದಾರೆ.

            ಇಂದು ಪಟಿಯಾಲದಲ್ಲಿ ಹಣದುಬ್ಬರದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಸಿಧು, ""ಘನ ನ್ಯಾಯಾಲಯದ ತೀರ್ಪಿಗೆ ತಲೆ ಬಾಗುವುದಾಗಿ" ಟ್ವೀಟ್ ಮಾಡಿದ್ದಾರೆ.

           ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಎಸ್ ಕೆ ಕೌಲ್ ಅವರ ಪೀಠ, ರಸ್ತೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಿಧು ಅವರನ್ನು ಆರೋಪಮುಕ್ತಗೊಳಿಸಿದ್ದ ಮೇ 2018ರ ಆದೇಶವನ್ನು ಮರುಪರಿಶೀಲಿಸಿ ಇಂದು 1 ವರ್ಷದ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries