HEALTH TIPS

ಹಣದುಬ್ಬರ ನಿಯಂತ್ರಣಕ್ಕೆ ಯತ್ನ; ರೆಪೊ ದರ 40 ಬಿಪಿಎಸ್, ಶೇ.4.40ಕ್ಕೆ ಹೆಚ್ಚಳ, ತಕ್ಷಣದಿಂದಲೇ ಜಾರಿ: ಆರ್‌ಬಿಐ

             ನವದೆಹಲಿ: ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ.


           ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 'ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಸಿ ರೆಪೊ ದರಗಳನ್ನು 40 ಮೂಲಾಂಶಗಳಷ್ಟು ಹೆಚ್ಚಿಸಲು ಎಂಪಿಸಿ ಸರ್ವಾನುಮತದಿಂದ ಮತ ಹಾಕಿದೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ. ಜಾಗತಿಕ ಆರ್ಥಿಕ ಅಸ್ಥಿರತೆ ನಡುವೆಯೂ ಭಾರತೀಯ ಆರ್ಥಿಕತೆ ಸ್ಥಿರವಾಗಿದೆ ಎಂದು ಹೇಳಿದರು.

           ಅಂತೆಯೇ ನಗದು ಮೀಸಲು ಅನುಪಾತವನ್ನು (ಕ್ಯಾಶ್ ರಿಸರ್ವ್ ರೇಷಿಯೊ) ಬೇಡಿಕೆಯ 50 ಮೂಲಾಂಶ ಹೆಚ್ಚಿಸಲಾಗಿದ್ದು, ಶೇ 4.5ಕ್ಕೆ ನಿಗದಿಪಡಿಸಲಾಗಿದೆ. ಇದು 2022ರ ಮೇ 21ರಿಂದ ಜಾರಿಗೆ ಬರಲಿದೆ ಎಂದೂ ಅವರು ಮಾಹಿತಿ ನೀಡಿದರು.

         ಸುದ್ದಿಗೋಷ್ಠಿ ವೇಳೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಯನ್ನು ಉಲ್ಲೇಖಿಸಿದ ಶಕ್ತಿಕಾಂತ್ ದಾಸ್ ಅವರು, ಯುದ್ಧದ ಆರ್ಥಿಕ ಪರಿಣಾಮಗಳು ಎಲ್ಲ ಕಡೆ ಹರಡುತ್ತಿವೆ. ಸರಕು ಮತ್ತು ಹಣಕಾಸು ಮಾರುಕಟ್ಟೆಯಲ್ಲಿ ಕೊರತೆ ಹಾಗೂ ಚಂಚಲತೆ ಹೆಚ್ಚಾಗುತ್ತಿದೆ. ವಿವೇಕಯುತ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರತವು ಸದ್ಯ ಆರ್ಥಿಕ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದೆ ಎಂದು ಹೇಳಿದರು.

          ಅಲ್ಲದೆ 12 ಆಹಾರ ಉಪಗುಂಪುಗಳಲ್ಲಿ 9 ಸಮೂಹ ಸಂಸ್ಥೆಗಳು ಮಾರ್ಚ್ ತಿಂಗಳಲ್ಲಿ ಹಣದುಬ್ಬರದಲ್ಲಿ ಹೆಚ್ಚಳವನ್ನು ದಾಖಲಿಸಿದೆ. ಏಪ್ರಿಲ್‌ನ ಬೆಲೆ ಏರಿಕ ಸೂಚಕಗಳು ಆಹಾರದ ಬೆಲೆ ಒತ್ತಡದ ನಿರಂತರತೆಯನ್ನು ಸೂಚಿಸುತ್ತಿವೆ. 21ನೇ ಮೇ 2022 ರಿಂದ ಹದಿನೈದು ದಿನಗಳಿಂದ ಜಾರಿಯಾಗುವ ನಿವ್ವಳ ಬೇಡಿಕೆ ಮತ್ತು ಸಮಯದ ಹೊಣೆಗಾರಿಕೆಗಳಿಗಾಗಿ ನಗದು ಮೀಸಲು ಅನುಪಾತವನ್ನು (CRR) 50 ಬೇಸಿಸ್ ಪಾಯಿಂಟ್‌ಗಳಿಂದ 4.5% ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. CRR ನಲ್ಲಿನ ಈ ಹೆಚ್ಚಳದ ಮೂಲಕ ನಗದು ಹಿಂತೆಗೆದುಕೊಳ್ಳುವಿಕೆಯು ರೂ. 87,000 ಕೋಟಿ ರೂ ಆಗಿದೆ ಎಂದು ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries