HEALTH TIPS

ಜೈಲಿನಲ್ಲಿ ಗುಮಾಸ್ತ ಕೆಲಸಕ್ಕೆ ನವಜೋತ್‌ ಸಿಧು ನೇಮಕ: ದಿನಕ್ಕೆ ₹90 ಸಂಬಳ

            ಚಂಡೀಗಡ: ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಗುಮಾಸ್ತ ಕೆಲಸ ಮಾಡುತ್ತಿದ್ದಾರೆ.

            34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10ರಲ್ಲಿ ಇರಿಸಲಾಗಿದೆ.   ಅವರು ಇತರೆ ಮೂವರು ಜೊತೆ ಕೊಠಡಿಯಲ್ಲಿ ಇದ್ದಾರೆ.

           ಸದ್ಯ ಅವರಿಗೆ ಗುಮಾಸ್ತ ಕೆಲಸ ನೀಡಲಾಗಿದೆ. ಅವರಿಗೆ ದಿನಕ್ಕೆ ₹90 ದಿನಗೂಲಿ ನೀಡಲಾಗುವುದು ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

                ಬೆಳಗ್ಗೆ 9 ಗಂಟೆಯಿಂದ 1 ಗಂಟೆಯವರೆಗೂ ಹಾಗೂ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೂ ಕೆಲಸ ಮಾಡುತ್ತಾರೆ. ಅವರ ಕೊಠಡಿ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

            ಸದ್ಯ ಅವರು ಕೊಠಡಿಯಲ್ಲಿ ಇನ್ನೂ ನಾಲ್ಕು ಕೈದಿಗಳು ಜತೆಯಲ್ಲಿ ಇದ್ದಾರೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries