ಕುಂಬಳೆ: ಗಡಿನಾಡು ಕಾಸರಗೋಡಿನ ಸಾಂಸ್ಕøತಿಕ, ಸಾಮಾಜಿಕ ಚಟುವಟಿಕೆಗಳು ಸ್ತುತ್ಯರ್ಹವಾದುದು ಎಂದು ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
ಅವರು ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಮೇ 22ರಂದು ಕುಂಬಳೆ ನಾರಾಯಣಮಂಗಲದಲ್ಲಿ ನಡೆಯಲಿರುವ ದತ್ತಿ ನಿಧಿ ಪ್ರಶಸ್ತಿ ಪ್ರದಾನ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಾರಥಿಗಳಿಗೆ ಅಭಿನಂದನಾ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.
ಗಡಿನಾಡಿನ ಕನ್ನಡ ಭಾಷೆ, ಸಂಸ್ಕøತಿ ಉಳಿಸುವಲ್ಲಿ ಕನ್ನಡಪರ ಸಂಘಟನೆಗಳು ನಡೆಸುವ ಎಲ್ಲ ಕಾರ್ಯಗಳಿಗೆ ಎಂದಿಗೂ ಶ್ರೀಕ್ಷೇತ್ರದ ಆಶೀರ್ವಾದ ಹಾಗೂ ಸಂಪೂರ್ಣ ಬೆಂಬಲವಿರುವುದಾಗಿ ತಿಳಿಸಿದರು.
ಕನ್ನಡ ಮಾಧ್ಯಮ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎ.ಆರ್ ಸುಬ್ಬಯ್ಯಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಂಗಾಧರ ಯಾದವ್, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ, ಪತ್ರಕರ್ತ, ಲೇಖಕ ರವಿ ನಾಯ್ಕಾಪು, ಮಾಜಿ ಅಧ್ಯಕ್ಷ ಅಚ್ಯುತ ಚೇವಾರ್, ಸಮಾಜಸೇವಕ, ಉದ್ಯಮಿ ಗೋಪಾಲ ಶೆಟ್ಟಿ ಅರಿಬೈಲು, ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ಸ್ಮಾರಕ ಕನ್ನಡ ಗ್ರಂಥಾಲಯ ಸಮಿತಿ ಸಮಚಾಲಕ ವಾಮನ ರಾವ್ ಬೇಕಲ್ ಉಪಸ್ಥಿತರಿದ್ದರು.





