HEALTH TIPS

ವಿದ್ಯಾರ್ಥಿಗಳ ಸೇವಾ ಕೇಂದ್ರ ಸ್ಥಾಪನೆಗೆ ಯುಜಿಸಿ ಸಲಹೆ: ಹೊಸ ಮಾರ್ಗಸೂಚಿ ಇಲ್ಲಿದೆ

         ನವದೆಹಲಿ: ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸಂಬಂಧ ವಿದ್ಯಾರ್ಥಿಗಳ ಸೇವಾ ಕೇಂದ್ರಗಳ (ಎಸ್‌ಎಸ್‌ಸಿ) ಸ್ಥಾಪಿಸಬೇಕು ಎಂಬುದು ಸೇರಿದಂತೆ ಹಲವು ನೂತನ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸಿದ್ಧಪಡಿಸಿದೆ.

          'ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಉತ್ಸಾಹಭರಿತ, ಕ್ರಿಯಾಶೀಲ ಕ್ಯಾಂಪಸ್‌ಗಳನ್ನು ಹೊಂದಬೇಕು ಎಂಬುದೇ ಈ ನೂತನ ಮಾರ್ಗಸೂಚಿಗಳ ರಚನೆಯ ಉದ್ದೇಶ' ಎಂದು ಯುಜಿಸಿ ಚೇರಮನ್ ಜಗದೀಶಕುಮಾರ್‌ ತಿಳಿಸಿದ್ದಾರೆ.

            'ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳಬೇಕು. ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳುವುದು, ಇತರರಿಗೆ ನೆರವು ನೀಡಲು ತಮ್ಮದೇ ಆದ ಗುಂಪು ಕಟ್ಟಿಕೊಳ್ಳುವ ಮೂಲಕ ಅವರ ವ್ಯಕ್ತಿತ್ವದಲ್ಲಿ ಸರ್ವತೋಮುಖ ಅಭಿವೃದ್ಧಿ ಸಾಧಿಸುವುದೇ ಈ ನಡೆಯ ಉದ್ದೇಶ' ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

          'ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಉತ್ತಮವಾಗಿರಬೇಕು. ಆ ಮೂಲಕ ಒತ್ತಡ ಹಾಗೂ ನಡತೆಗೆ ಸಂಬಂಧಿಸಿ ಎದುರಾಗುವ ಸಮಸ್ಯೆಗಳನ್ನು ಅವರು ಸಮರ್ಥವಾಗಿ ಎದುರಿಸುವಂತಾಗಬೇಕು ಎಂಬುದು ಸಹ ಈ ನೂತನ ಮಾರ್ಗಸೂಚಿಗಳ ಉದ್ದೇಶವಾಗಿದೆ' ಎಂದು ಅವರು ಹೇಳಿದ್ದಾರೆ.

               'ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆ, ದೈಹಿಕ ಸಾಮರ್ಥ್ಯ ಹೆಚ್ಚಳಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿವೆ, ಮಾನವ ಸಂಪನ್ಮೂಲ ಇದೆ. ಆದರೆ, ದೈಹಿಕ ಚಟುವಟಿಕೆಗಳು ಕಡ್ಡಾಯ ಇಲ್ಲ. ಈ ನ್ಯೂನತೆಯನ್ನು ಸರಿಪಡಿಸಬೇಕು' ಎಂದು ಯುಜಿಸಿ ರೂಪಿಸಿರುವ ಈ ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.

                               ನೂತನ ಮಾರ್ಗಸೂಚಿಯ ಮುಖ್ಯಾಂಶಗಳು:

* ಉತ್ತಮ ಬೋಧನಾ-ಕಲಿಕಾ ಪರಿಸರ ನಿರ್ಮಾಣವಾಗಬೇಕು

* ಎಲ್ಲರಿಗೂ ಸಮಾನ ಅವಕಾಶಗಳು ಸಿಗುವಂತಾಗಬೇಕು

* ಸಹಪಠ್ಯ ಚಟುವಟಿಕೆ, ಸಮಾಜಮುಖಿ ಕಾರ್ಯಗಳಿಗೆ ಒತ್ತು

* ತರಬೇತಿ, ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದು

* ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಮಹಿಳೆ ಉತ್ತೇಜನ


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries