HEALTH TIPS

ಭಯಾನಕ ದೃಶ್ಯ: ಎರಡು ಖಾಸಗಿ ಬಸ್‌ಗಳ ನಡುವೆ ಭೀಕರ ಡಿಕ್ಕಿ; ವಿಡಿಯೋ ವೈರಲ್!

          ಚೆನ್ನೈತಮಿಳುನಾಡಿನ ಸೇಲಂನಲ್ಲಿ ಎರಡು ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಾಹನವೊಂದರಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.


           ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಎಡಪ್ಪಾಡಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ತಿರುಚೆಂಗೋಡಿನಿಂದ ಬರುತ್ತಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿವೆ. ಎರಡು ಖಾಸಗಿ ಬಸ್‌ಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಡಿಕ್ಕಿಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

           ವೈರಲ್ ಆಗಿರುವ ವಿಡಿಯೋದಲ್ಲಿ, ಡಿಕ್ಕಿ ಹೊಡೆದ ನಂತರ ಬಸ್ಸಿನಲ್ಲಿ ಕುಳಿತಿದ್ದ ಚಾಲಕ ಡ್ರೈವಿಂಗ್ ಸೀಟ್‌ನಿಂದ ಹಾರಿ ಬಿಡುವುದನ್ನು ಮತ್ತು ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇನ್ನೊಬ್ಬ ವ್ಯಕ್ತಿ ವಾಹನದ ಮುಂಭಾಗದ ಗಾಜಿಗೆ ತಾಗುವುದನ್ನು ಕಾಣಬಹುದು. ಈ ಡಿಕ್ಕಿಯ ಪರಿಣಾಮ ವಾಹನಕ್ಕೆ ತೀವ್ರ ಹಾನಿಯಾಗಿದೆ.

           ಇತರ ಪ್ರಯಾಣಿಕರು ಕೂಡ ಆಘಾತಕ್ಕೊಳಗಾಗಿದ್ದು, ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸೇಲಂ ಮತ್ತು ಎಡಪ್ಪಾಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries