HEALTH TIPS

ಕುರಿಯ ಗಣಪತಿ ಶಾಸ್ತ್ರಿಗಳಿಗೆ ಶ್ರೀ ವಿದ್ಯಾಮಾನ್ಯ ಪ್ರಶಸ್ತಿ.

                  ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನಲ್ಲಿ ಮೂರು ದಶಕಗಳ ಕಾಲ ಭಾಗವತರಾಗಿ, ಅನುಭವಿ ರಂಗ ನಿರ್ದೇಶಕರಾಗಿ ಸೇವೆ ಸಲ್ಲಿಸಿದ  ಕುರಿಯ ಗಣಪತಿ ಶಾಸ್ತ್ರಿಗಳು ಆಯ್ಕೆಯಾಗಿದ್ದಾರೆ.

              ತೆಂಕುತಿಟ್ಟು ಯಕ್ಷಗಾನದ ಗುರುಕುಲವೆಂದು ಮನ್ನಣೆ ಪಡೆದ ಕಾಸರಗೋಡು ಪೈವಳಿಕೆ ಕುರುಡಪದವು ಸಮೀಪದ ಕುರಿಯ ಮನೆತನದವರಾದ ಗಣಪತಿ ಶಾಸ್ತ್ರಿಗಳು, ತಮ್ಮ ದೊಡ್ಡತಂದೆಯವರಾದ ಕುರಿಯ ವಿಠಲ ಶಾಸ್ತ್ರಿಗಳ ಶಿಷ್ಯರಾಗಿ ಪ್ರಸಿದ್ಧ ವೇಷಧಾರಿಯಾಗಿದ್ದವರು. ಅಗರಿ ಶ್ರೀನಿವಾಸ ಭಾಗವತರ ಪ್ರೇರಣೆಯೊಂದಿಗೆ ಭಾಗವತಿಕೆ ಕ್ಷೇತ್ರವನ್ನು ಪ್ರವೇಶಿಸಿದರು. ಕಟೀಲು ಮೇಳದಲ್ಲಿ ಪ್ರದಾನ ಭಾಗವತರಾಗಿ ಮೂರು ದಶಕಗಳ ವ್ಯವಸಾಯದ ಅವಧಿಯಲ್ಲಿ ನೆಡ್ಲೆ ನರಸಿಂಹ ಭಟ್, ಮರವಂತೆ ನರಸಿಂಹದಾಸ, ಪಡ್ರೆ ಚಂದ್ರು, ಕೇದಗಡಿ ಗುಡ್ಡಪ್ಪ ಗೌಡ, ಮುದುಕುಂಜ ವಾಸುದೇವ ಪ್ರಭು, ಕುಡಾಣ ಗೋಪಾಲ ಭಟ್, ಕೋಡಿ ಕುಷ್ಠ ಗಾಣಿಗ, ಪುಂಡರಿಕಾಕ್ಷ ಉಪಾಧ್ಯಾಯ, ಗೇರುಕಟ್ಟೆ ಗಂಗಯ್ಯ ಶೆಟ್ಟಿ ಮುಂತಾದ ಹಿರಿಯ ಕಲಾವಿದರೊಂದಿಗೆ ಒಡನಾಟದ ಅನುಭವವನ್ನು ಹೊಂದಿದ್ದಾರೆ. ಮೇ 11, 2022 ಬುಧವಾರ ಪೂರ್ವಾಹ್ನ 11.00 ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ವನ್ನು ಪ್ರಶಸ್ತಿ ಫಲಕ ಮತ್ತು ರೂ. 50,000 ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries