HEALTH TIPS

ಕೇಂದ್ರದಿಂದ ಒಕ್ಕೂಟ ರಚನೆ ನಾಶ; ಬಿಜೆಪಿ ಆಡಳಿತ ಹಿಟ್ಲರ್, ಸ್ಟಾಲಿನ್ ಗಿಂತ ಕೆಟ್ಟದಾಗಿದೆ: ಮಮತಾ ಬ್ಯಾನರ್ಜಿ

             ಕೋಲ್ಕತ್ತಾ: ಕೇಂದ್ರ ಸರ್ಕಾರವು ರಾಜ್ಯಗಳ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ಆಡಳಿತವು ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸೊಲೊನಿ ಆಡಳಿತಕ್ಕಿಂತ ಕೆಟ್ಟದಾಗಿದೆ ಎಂದು ಸೋಮವಾರ ಕಟುವಾಗಿ ಟೀಕಿಸಿದ್ದಾರೆ.

              ಇಂದು ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಕೇಂದ್ರೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

               ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಲು ಕೇಂದ್ರ ಸಂಸ್ಥೆಗಳನ್ನು ಬಳಸುತ್ತಿದೆ. ಇದು ದೇಶದ ಒಕ್ಕೂಟ ರಚನೆಯನ್ನು ನಾಶ ಮಾಡುತ್ತಿದೆ. ದೇಶದಲ್ಲಿ ತುಘಲಕ್ ಆಡಳಿತ ಜಾರಿಯಲ್ಲಿದೆ. ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಏಜೆನ್ಸಿಗಳಿಗೆ ಸ್ವಾಯತ್ತತೆ ನೀಡಬೇಕು ಎಂದಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries