ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತಿ ತನ್ನ 2021-22 ವಾರ್ಷಿಕ ಯೋಜನೆಯ ಭಾಗವಾಗಿ ವಿಕಲಚೇತನ ಎಸ್‍ಸಿ ಮತ್ತು ಎಸ್‍ಟಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದೆ.
ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಶಮೀನಾ ಟೀಚರ್ ಉದ್ಘಾಟಿಸಿದರು. ಆಯ್ದ ಪರಿಶಿಷ್ಟ ಜಾತಿಯ ಆರು ಮಂದಿ ವಿಕಲ ಚೇತನರಿಗೆ ಮೂರು ಚಕ್ರದ ಸ್ಕೂಟರ್‍ಗಳನ್ನು ವಿತರಿಸಲಾಯಿತು. ಉಪಾಧ್ಯಕ್ಷ ಪಿ.ಕೆ.ಮಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ವತಿಯಿಂದ 5,78,000 ರೂ.ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರು ಕಾರ್ಯಗತಗೊಳಿಸಿದ್ದಾರೆ. ಬ್ಲಾಕ್ ಅಭಿವೃದ್ಧಿ ಅಧಿಕಾರಿ ಸೀಮಾ ಕೂಂಚಲ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಜ್ಯೋತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಎ.ಶಂಸೀನಾ, ಅಭಿವದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಾ ಬಲ್ಲಾಳ್, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಹೊಸಂಗಡಿ, ಸದಸ್ಯರಾದ ಕೆ.ಅಶೋಕ, ಶಫಾ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.




.jpg)
