ಬದಿಯಡ್ಕ: ನೀರ್ಚಾಲು ಸಮೀಪದ ಮಾನ್ಯ ಕಾರ್ಮಾರು ಶ್ರೀಮಹಾವಿಷ್ಣು ಕ್ಷೇತ್ರದಲ್ಲಿ ಶ್ರೀಸತ್ಯನಾರಾಯಣ ಪೂಜೆ, ಜೀರ್ಣೋದ್ದಾರ ನಿಧಿಗೆ ಚಾಲನೆ ಮತ್ತು ನೂತನ ಜೀರ್ಣೋದ್ದಾರ ಸಮಿತಿಗಳ ರಚನೆ ನಾಳೆ(ಮೇ.22) ಭಾನುವಾರ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ಹಾಗೂ ಎಡನೀರು ಮಠಾಧೀಶರ ನೇತೃತ್ವದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಶ್ರೀಸತ್ಯನಾರಾಯಣ ಪೂಜಾರಂಭ, 8.30 ಕ್ಕೆ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಆಗಮನ, ಪೂರ್ಣಕುಂಭ ಸ್ವಾಗತ, ಪಾದಪೂಜೆ ನಡೆಯಲಿದೆ. ಬಳಿಕ 9.30 ರಿಂದ ಶ್ರೀಗಳು ಜೀರ್ಣೋದ್ದಾರ ನಿಧಿ ಸಂಗ್ರಹಕ್ಕೆ ಚಾಲನೆ ನೀಡುವರು. 10 ಕ್ಕೆ ಜೀರ್ಣೋದ್ದಾರದ ನೂತನ ಸಮಿತಿ ರಚನೆ ಹಾಗೂ ಯೋಜನೆಗಳ ಬಗ್ಗೆ ಚರ್ಚೆ, ವಿವರಗಳು ನಡೆಯಲಿವೆ. ಮಧ್ಯಾಹ್ನ 12 ಕ್ಕೆ ಶ್ರೀಸತ್ಯನಾರಾಯಣ ಪೂಜೆಯ ಮಂಗಳಾರತಿ, 12.30 ಕ್ಕೆ ಶ್ರೀದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ.




.jpg)
