ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಶ್ರೀನಗರ ಸಂಸದ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
0
samarasasudhi
ಮೇ 27, 2022
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಶ್ರೀನಗರ ಸಂಸದ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಮೇ 31ರಂದು ಚಂಡೀಗಡದ ಕಚೇರಿಗೆ ಬಂದು ವಿಚಾರಣೆಯಲ್ಲಿ ಪಾಲ್ಗೊಳ್ಳಲು ಇ.ಡಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದು ಇದೇ ಮೊದಲೇನಲ್ಲ. ಜೆಕೆಸಿಎನಲ್ಲಿ ಅಬ್ದುಲ್ಲಾ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ 43 ಕೋಟಿ ರೂಪಾಯಿ ದುರ್ಬಳಕೆ ಆಗಿದೆ ಎಂಬ ಆರೋಪ ಸಂಬಂಧ 2020ರ ಅಕ್ಟೋಬರ್ 21 ರಂದು ಸತತ 7 ತಾಸುಗಳ ಕಾಲ ವಿಚಾರಣೆ ನಡೆಸಲಾಗಿತ್ತು.
2019ರ ಜುಲೈನಲ್ಲಿ, 2018ರಲ್ಲಿಯೂ ಅಬ್ದುಲ್ಲಾ ಅವರ ವಿಚಾರಣೆ ನಡೆಸಲಾಗಿದೆ. 2020ರ ಡಿಸೆಂಬರ್ 19ರಂದು ಜೆಕೆಸಿಎ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಬ್ದುಲ್ಲಾ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇದನ್ನು ಪ್ರಶ್ನಿಸಿ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.