HEALTH TIPS

ಹನಿಟ್ರ್ಯಾಪ್ ಜಾಲಕ್ಕೆ ಬಿದ್ದು ಪಾಕ್ ಮಹಿಳಾ ಏಜೆಂಟ್ ಗೆ ಗೌಪ್ಯ ಮಾಹಿತಿ ಸೋರಿಕೆ, ಯೋಧ ಅರೆಸ್ಟ್

              ಜೈಪುರ: ಪಾಕಿಸ್ತಾನದ ಮಹಿಳಾ ಏಜೆಂಟ್ ಜೊತೆಗೆ ದೇಶದ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಹಂಚಿಕೊಂಡಿದ್ದ ಭಾರತೀಯ ಸೇನೆಯ ಯೋಧರೊಬ್ಬರನ್ನು ಬಂಧಿಸಲಾಗಿದೆ ಎಂದು ಉನ್ನತ ಗುಪ್ತಚರ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

          ಜೋದ್ ಪುರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಯೋಧ ಪ್ರದೀಪ್ ಕುಮಾರ್ ಪಾಕ್ ಮಹಿಳಾ ಏಜೆಂಟ್ ಜೊತೆಗೆ ಸಂಪರ್ಕದಲ್ಲಿದ್ದರು. ಕಳೆದ ಕೆಲ ದಿನಗಳಿಂದ ಅವರ ಮೇಲೆ ತೀವ್ರ ನಿಗಾ ವಹಿಸಿ, ಇದೀಗ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

              ಫೇಸ್ ಬುಕ್ ಮತ್ತು ವಾಟ್ಸಾಪ್ ಮೂಲಕ ಪಾಕ್ ಮಹಿಳೆ ಜೊತೆಗೆ ಸಂಪರ್ಕ ಸಾಧಿಸಿರುವ ಯೋಧ ಆಕೆಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡಿದ್ದಾರೆ. ವಿಚಾರಣೆಗಾಗಿ ಮೇ 18 ರಂದು ಆರೋಪಿಯನ್ನು ವಶಕ್ಕೆ ಪಡೆದು ನಂತರ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

            ಕಳೆದ ಆರು ತಿಂಗಳ ಹಿಂದೆ ಯೋಧನ ಮೊಬೈಲ್ ಗೆ ಕರೆ ಮಾಡಿರುವ ಮಹಿಳೆ ತಾನು ಬೆಂಗಳೂರಿನ ಮಿಲಿಟರಿ ನರ್ಸಿಂಗ್ ಸೇವಾ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದಾಳೆ. ದೆಹಲಿಯಲ್ಲಿ ತನನ್ನು ಭೇಟಿಯಾಗುವಂತೆ ಹಾಗೂ ಮದುವೆಯಾಗುವಂತೆ ಪ್ರಸ್ತಾಪಿಸಿದ್ದಾಳೆ. ಕುಮಾರ್ ಒಂದು ಸಲ ಹನಿಟ್ರ್ಯಾಪ್ ಗೆ ಬಿದ್ದ ನಂತರ ಸೋಶಿಯಲ್ ಮೀಡಿಯಾ ಮೂಲಕ ಆಕೆ ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಡೆದುಕೊಂಡಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

            ಕುಮಾರ್ ವಿರುದ್ಧ ಅಧಿಕೃತ ರಹಸ್ಯಗಳ ಕಾಯ್ದೆ 1923 ಅಡಿಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries