HEALTH TIPS

ಮೂರು ಲೋಕಸಭಾ ಮತ್ತು ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

           ನವದೆಹಲಿ: ಮೂರು ಲೋಕಸಭಾ ಕ್ಷೇತ್ರ ಮತ್ತು ವಿವಿಧ ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಜೂನ್ 23ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

          ಉತ್ತರ ಪ್ರದೇಶದ ಅಜಂಗಢ ಮತ್ತು ರಾಂಪುರದಲ್ಲಿ ಕ್ರಮವಾಗಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಮೊಹಮ್ಮದ್ ಅಜಂ ಖಾನ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಲೋಕಸಭಾ ಸ್ಥಾನ ಮತ್ತು ಪಂಜಾಬ್‌ನಲ್ಲಿ ಭಗವಂತ ಮಾನ್ ಅವರು ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

            ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

                ಉಳಿದಂತೆ ಜಾರ್ಖಂಡ್, ಆಂಧ್ರ ಪ್ರದೇಶ, ಅಗರ್ತಲಾ, ತ್ರಿಪುರಾಗಳಲ್ಲಿ ತೆರವಾಗಿರುವ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಜೂನ್ 26ರಂದು ಮತ ಎಣಿಕೆ ನಡೆಯುತ್ತದೆ ಎಂದು ಆಯೋಗ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries