HEALTH TIPS

ಬುದ್ಧ ಪೂರ್ಣಿಮೆ: ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬೌದ್ಧ ಸಂಸ್ಕೃತಿ ಕೇಂದ್ರಕ್ಕೆ ಶಂಕುಸ್ಥಾಪನೆ

            ಲುಂಬಿನಿ: ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ.

            ಹಲಿ ಅಂತರರಾಷ್ಟ್ರೀಯ ಬೌದ್ಧ ಒಕ್ಕೂಟಕ್ಕೆ (ಐಬಿಸಿ) ಸೇರಿದ ಜಾಗದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, ಈ ವೇಳೆ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಕೂಡ ಇದ್ದರು.

             ಇದಕ್ಕೂ ಮುನ್ನ, ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಹಾಗೂ ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಅವರು ಮಾಯಾ ದೇವಿ ದೇವಾಲಯದ ಆವರಣದಲ್ಲಿರುವ ಬುದ್ಧದನ ಜನ್ಮದ ಗುರುತು ಕಲ್ಲಿಗೆ ಗೌರವ ಸಲ್ಲಿಸಿದರು. ಇದನ್ನು ಭಗವಾನ್ ಬುದ್ಧನ ನಿಖರವಾದ ಜನ್ಮ ಸ್ಥಳ ಎಂದು ಗುರುತಿಸಲಾಗುತ್ತದೆ. ಈ ವೇಳೆ ಬೌದ್ಧ ವಿಧಿಗಳ ಪ್ರಕಾರ ಪೂಜೆ ನೆರವೇರಿಸಲಾಯಿತು.

            ಈ ನಡುವೆ, ಉಭಯ ನಾಯಕರು ದೇವಾಲಯದ ಪಕ್ಕದಲ್ಲಿರುವ ಅಶೋಕ ಸ್ತಂಭದ ಬಳಿಯ ದೀಪಗಳನ್ನು ಬೆಳಗಿಸಿದರು. ಕ್ರಿಸ್ತಪೂರ್ವ 249 ರಲ್ಲಿ ಚಕ್ರವರ್ತಿ ಅಶೋಕನಿಂದ ಈ ಸ್ತಂಭವು ಸ್ಥಾಪಿಸಲ್ಪಟ್ಟಿದೆ. ಲುಂಬಿನಿಯು ಭಗವಾನ್ ಬುದ್ಧನ ಜನ್ಮಸ್ಥಳವಾಗಿದೆ ಎಂಬುದನ್ನು ಹೇಳುವ ಮೊದಲ ಶಿಲಾಶಾಸನವನ್ನು ಈ ಸ್ತಂಭ ಹೊಂದಿದೆ.

          ಇದೇ ವೇಳೆ, 2014ರಲ್ಲಿ ಮೋದಿ ಲುಂಬಿನಿ ವನಕ್ಕೆ ಕೊಡುಗೆಯಾಗಿ ನೀಡಿದ್ದ ಬೋಧಿ ವೃಕ್ಷದ ಸಸಿಗೆ ಉಭಯ ನಾಯಕರು ನೀರೆರೆದರು. ಈ ಕುರಿತಂತೆ ಚಿತ್ರ ಸಹಿತ ಪ್ರಧಾನಿ ಸಚಿವಾಲಯವು ಟ್ವೀಟ್ ಮಾಡಿದೆ.

           2014ರಿಂದ ನೇಪಾಳಕ್ಕೆ ಪ್ರಧಾನಿಯವರ ಐದನೇ ಭೇಟಿ ಇದಾಗಿದೆ. ಉತ್ತರ ಪ್ರದೇಶದ ಕುಶಿನಗರದಿಂದ ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಮೋದಿ ಇಲ್ಲಿಗೆ ಆಗಮಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries