ನವದೆಹಲಿ: ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ತಂತ್ರಜ್ಞಾನದ ಸೂಕ್ತ ಬಳಕೆಯೊಂದಿಗೆ ಅತ್ಯಂತ ಸಮರ್ಥವಾಗಿ ಮತ್ತು ನಿರ್ವಹಿಸಲಾಗಿದೆ ಎಂದು ಮೈಕ್ರೋಸಾಫ್ಟ್ ಸಹ-ಸ್ಥಾಪಕ, ಉದ್ಯಮಿ ಬಿಲ್ ಗೇಟ್ಸ್ ಅಭಿಪ್ರಾಯಪಟ್ಟಿದ್ದಾರೆ.
0
samarasasudhi
ಮೇ 30, 2022
ನವದೆಹಲಿ: ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ತಂತ್ರಜ್ಞಾನದ ಸೂಕ್ತ ಬಳಕೆಯೊಂದಿಗೆ ಅತ್ಯಂತ ಸಮರ್ಥವಾಗಿ ಮತ್ತು ನಿರ್ವಹಿಸಲಾಗಿದೆ ಎಂದು ಮೈಕ್ರೋಸಾಫ್ಟ್ ಸಹ-ಸ್ಥಾಪಕ, ಉದ್ಯಮಿ ಬಿಲ್ ಗೇಟ್ಸ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ, ಕೋವಿಡ್ ನಿರ್ವಹಣೆ ಮತ್ತು ಲಸಿಕೆ ಕಾರ್ಯಕ್ರಮಕ್ಕೆ ಕೈಗೊಂಡ ಕ್ರಮಗಳು ಮೆಚ್ಚುವಂಥಾದ್ದು. ಇದು ಜಗತ್ತಿನ ಇತರ ದೇಶಗಳಿಗೂ ಮಾದರಿ, ತಂತ್ರಜ್ಞಾನದ ಸಮರ್ಥ ಬಳಕೆಯ ಪ್ರಯೋಜನ ಜನರಿಗೆ ದೊರೆತಿದೆ ಎಂದು ಬಿಲ್ ಗೇಟ್ಸ್ ಹೇಳಿದ್ದಾರೆ.
ದೇಶದಲ್ಲಿ ಕೋವಿನ್ ಆಯಪ್ ಮೂಲಕ ಲಸಿಕೆ ಕಾರ್ಯಕ್ರಮವನ್ನು ವ್ಯಾಪಕವಾಗಿ, ವಿವಿಧ ಹಂತಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.
ದೇಶದಾದ್ಯಂತ ಒಟ್ಟು 193.13 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.