ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ ಬಿರುಸಿನ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಜನತೆ ಸಂಕಷ್ಟ ಅನುಭವಿಸಿದರು. ರಸ್ತೆಗಳಲ್ಲಿ ಮಳೆನೀರು ತುಂಬಿಕೊಂಡು ವಾಹನ ಸಂಚಾರಕ್ಕೂ ತೊಡಕುಂಟಾಯಿತು. ಏಕಾಏಕಿ ಸಉರಿದ ಮಳೆಗೆ ಜನತೆ ಪರದಾಡಿದರು.
ತಲಪ್ಪಾಡಿಯಿಂದ ಚೆರ್ಕಳ ವರೆಗೆ ರಾಷ್ಟ್ರೀಯ ಹೆದ್ದಾರಿ ಷಟ್ಪಥವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ರಸ್ತೆ ಅಂಚಿನ ಚರಂಡಿ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕುಂಬಳೆಯಿಂದ ಮುಳ್ಳೇರಿಯ ವರೆಗಿನ ರಸ್ತೆಯೂ ಅಭಿವೃದ್ಧಿಗೊಳ್ಳುತ್ತಿದ್ದು, ಬಿರುಸಿನ ಮಳೆಗೆ ರಸ್ತೆ ಕೆಸರುಮಯವಾಗಿದೆ.




