ಕಾಸರಗೋಡು: ಕಾಸರಗೋಡು ಜಿಲ್ಲಾ ಪತ್ರಕರ್ತರ ಕೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುಂಬಳೆ ನಾರಾಯಣಮಂಗಲದಲ್ಲಿ ಭಾನುವಾರ ಆಯೋಜಿಸಿದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಾರಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಕಾಸರಗೋಡು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ವಾಮನ ರಾವ್ ಬೇಕಲ್ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಕೂಡ್ಲು ಅವರಿಗೆ ಕಾಸರಗೋಡು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವದ್ಧಿ ಸಂಘ ಹಾಗು ಕೆಯುಡಬ್ಲ್ಯುಜೆ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸಮ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಮಾಧ್ಯಮ ತಜ್ಞ ಡಾ.ಈಶ್ವರ್ ದೈತೋಟ, ಡಾ.ಸದಾನಂದ ಪೆರ್ಲ, ಜಯಪ್ರಕಾಶ್ ಶೆಟ್ಟಿ ಉಪ್ಪಳ, ನಾರಾಯಣಮಂಗಲ ಎಎಲ್‍ಪಿ ಶಾಲೆಯ ಆಡಳಿತಾಧಿಕಾರಿ ಗೋಪಾಲಕೃಷ್ಣ ಭಟ್ ಕಬೆಕ್ಕೋಡು ಮೊದಲಾದವರು ಉಪಸ್ಥಿತರಿದ್ದರು.




.jpg)
