HEALTH TIPS

ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ: ಗೃಹ ಮತ್ತು ವಾಣಿಜ್ಯ ಬಳಕೆ ಅಡುಗೆ ಅನಿಲದ ದರ ಪರಿಷ್ಕಾರ

     ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. 

      ಈ ಮೂಲಕ ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ಈ ಮೊದಲು 999.50 ರೂಪಾಯಿಗಳಿದ್ದವು. 
ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಈಗ, 14.2 ಕೆಜಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಸಾವಿರ ರೂಪಾಯಿ ಗಡಿಯನ್ನು ಮೀರಿದೆ.

     ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಹೆಚ್ಚಿಸಲಾಗಿತ್ತು.

     14.2 ಕೆಜಿ LPG ಸಿಲಿಂಡರ್ ಈಗ ದೆಹಲಿಯಲ್ಲಿ 1003 ರೂ, ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 1029 ರೂಪಾಯಿಗೆ ದರವನ್ನು ಪರಿಷ್ಕರಿಸಲಾಗಿದೆ. ದರ ಏರಿಕೆಯ ನಂತರ ಚೆನ್ನೈ ಸಿಲಿಂಡರ್ ಬೆಲೆ 1018.5 ರೂಪಾಯಿ ಆಗಿದೆ. ಮುಂಬೈನಲ್ಲಿ ಹೊಸ ದರ 1003 ರೂಪಾಯಿ ಆಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries