HEALTH TIPS

ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನ

     ಸಿಡ್ನಿ: ಭೀಕರ ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ಸ್ಫೋಟಕ ಆಲ್‌ರೌಂಡರ್‌ ಆಂಡ್ರ್ಯೂ ಸೈಮಂಡ್ಸ್‌ ಅವರು ಮೃತಪಟ್ಟಿದ್ದಾರೆಂದು ಭಾನುವಾರ ತಿಳಿದುಬಂದಿದೆ.

      ನಿನ್ನೆ ರಾತ್ರಿ ಕ್ವೀನ್ಸ್‌ಲ್ಯಾಂಡ್‌ನ ಟೌನ್ಸ್‌ವಿಲ್ಲೆ ಹೊರವಲಯದಲ್ಲಿ ಎಂಬಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಸೈಮಂಡ್ಸ್ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

     ಮಾಹಿತಿಗಳ ಪ್ರಕಾರ ಮಧ್ಯರಾತ್ರಿ 11ರ ಸುಮಾರಿಗೆ ಹಾರ್ವೇ ರೇಂಜ್‌ ರಸ್ತೆಯಲ್ಲಿ ಸೈಮಂಡ್ಸ್‌ ಕಾರು ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

     ಕಾರಿನಲ್ಲಿ ಸೈಮಂಡ್ಸ್‌ ಒಬ್ಬರೇ ಇದ್ದರು. ಅಲೈಸ್‌ ರಿವರ್‌ ಬ್ರಿಡ್ಜ್‌ ಸಮೀಪ ನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಹೊರಗೆ ಸಂಚರಿಸಿ, ಪಲ್ಟಿಯಾಗಿದೆ. ತುರ್ತು ಸೇವಾ ತಂಡವು ಸೈಮಂಡ್ಸ್‌ ಅವರ ಜೀವ ಉಳಿಸಲು ಪ್ರಯತ್ನ ನಡೆಸಿದ್ದು, ಸಫಲವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

      46 ವರ್ಷದ ಕ್ರಿಕೆಟಿಗ ಸೈಮಂಡ್ಸ್‌ 26 ಟೆಸ್ಟ್‌, 198 ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳನ್ನು ಆಡಿದ್ದಾರೆ. 1998ರಿಂದ 2009 ನಡುವೆ ಒಟ್ಟು 198 ಏಕದಿನ, 26 ಟೆಸ್ಟ್‌ ಹಾಗೂ 14 ಟಿ-20 ಪಂದ್ಯಗಳಲ್ಲಿ ಸೈಮಂಡ್ಸ್‌ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2003 ಮತ್ತು 2007ರ ವಿಶ್ವಕಪ್‌ ಗೆಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries