ನವದೆಹಲಿ: ದೇಶದಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.
0
samarasasudhi
ಜೂನ್ 14, 2022
ನವದೆಹಲಿ: ದೇಶದಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಐಎಂಐಎಂಎ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ, ಟಿಎಂಸಿಯ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ ಎಂದು ಟೀಕೆ ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಪ್ರವೃತ್ತರಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಾಗುವುದು. ಪ್ರಧಾನ ಮಂತ್ರಿಗಳು ನೇಮಕಾತಿ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ.