HEALTH TIPS

ಜು.1ರಿಂದ ಏಕಬಳಕೆಯ ಪ್ಲಾಸ್ಟಿಕ್ ನಿಷೇಧ: ಯಾವುದನ್ನೆಲ್ಲ ಬಳಸುವಂತಿಲ್ಲ?

 ನವದೆಹಲಿ: 'ಏಕಬಳಕೆಯ ಪ್ಲಾಸ್ಟಿಕ್ (ಎಸ್‌ಯುಪಿ) ಉತ್ಪನ್ನಗಳ ನಿಷೇಧಕ್ಕೆ ಸಿದ್ಧರಾಗಲು ಉದ್ಯಮಗಳು ಮತ್ತು ಸಾರ್ವಜನಿಕರಿಗೆ ಕೇಂದ್ರ ಸರ್ಕಾರವು ಸಾಕಷ್ಟು ಕಾಲಾವಕಾಶ ನೀಡಿತ್ತು. ಜುಲೈ 1ರಿಂದ ಜಾರಿಯಾಗಲಿರುವ ನಿಷೇಧಕ್ಕೆ ಎಲ್ಲರ ಸಹಕಾರ ದೊರೆಯುವ ನಿರೀಕ್ಷೆ ಇದೆ' ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಮಂಗಳವಾರ ತಿಳಿಸಿದ್ದಾರೆ.

'ಪರಿಸರ ಸಂರಕ್ಷಣಾ ಕಾಯ್ದೆಯ (ಇಪಿಎ) ಅಡಿಯಲ್ಲಿ 19 ಬಗೆಯ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಹಂತಹಂತವಾಗಿ ಹೊರಹಾಕಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ₹ 1 ಲಕ್ಷ ನಗದು ದಂಡ ಅಥವಾ 5 ವರ್ಷಗಳ ಕಾಲ ವಿಸ್ತರಿಸಬಹುದಾದ ಜೈಲುಶಿಕ್ಷೆಯನ್ನು ವಿಧಿಸಬಹುದಾಗಿದೆ' ಎಂದು ಪರಿಸರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ಉದ್ಯಮಗಳ ಪ್ರತಿನಿಧಿಗಳು ನಿಷೇಧಕ್ಕೆ ಸಿದ್ಧರಿಲ್ಲವಲ್ಲ ಎನ್ನುವ ಪ್ರಶ್ನೆಗೆ, '2022ರ ಜುಲೈ 1ರೊಳಗೆ 19 ಬಗೆಯ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಹಂತಹಂತವಾಗಿ ತೆಗೆದುಹಾಕುವ ಅಧಿಸೂಚನೆಯನ್ನು 2021ರ ಆಗಸ್ಟ್‌ನಲ್ಲಿ ಹೊರಡಿಸಲಾಗಿದೆ. ಇಂಥ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುವವರಿಗೆ ನಾವು ಸಾಕಷ್ಟು ಕಾಲಾವಕಾಶವನ್ನೂ ನೀಡಿದ್ದೇವೆ. ಭವಿಷ್ಯದ ದೃಷ್ಟಿಯಿಂದ ಅವರಿಗೆ ಈ ಬಗ್ಗೆ ಅರ್ಥ ಮಾಡಿಸಿದ್ದೇವೆ. ಇದಕ್ಕೆ ಬಹುತೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ' ಎಂದು ಭೂಪೇಂದರ್ ಯಾದವ್ ಉತ್ತರಿಸಿದ್ದಾರೆ.

ನಿಷೇಧಿತ 19 ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳು: ಇಯರ್ ಬಡ್ಸ್, ಬಲೂನ್‌ಗಳಿಗೆ ಅಂಟಿಸುವ ಪ್ಲಾಸ್ಟಿಕ್ ಸ್ಟಿಕ್ಸ್‌, ಪ್ಲಾಸ್ಟಿಕ್ ಬಾವುಟ, ಕ್ಯಾಂಡಿ ಸ್ಟಿಕ್ಸ್, ಐಸ್‌ಕ್ರೀಂ ಕಡ್ಡಿಗಳು, ಪಾಲಿಸ್ಟೈರೇನ್ (ಥರ್ಮೊಕೋಲ್), ಪ್ಲಾಸ್ಟಿಕ್ ತಟ್ಟೆ, ಲೋಟಗಳು, ಪ್ಲಾಸ್ಟಿಕ್ ರೂಪದ ಗಾಜುಗಳು, ಫೋರ್ಕ್‌ಗಳು, ಚಮಚಗಳು, ಸ್ಟ್ರಾಗಳು, ಟ್ರೇಗಳು, ಚಾಕುಗಳು, ಸಿಹಿತಿನಿಸುಗಳ ಡಬ್ಬಿಗಳಲ್ಲಿ ಬಳಸುವ ಪ್ಯಾಕೇಜಿಂಗ್ ಫಿಲಂಗಳು, ಆಹ್ವಾನಪತ್ರಿಕೆಗಳು, ಸಿಗರೇಟು ಪ್ಯಾಕೇಟ್‌ಗಳು, 100 ಮೈಕ್ರಾನ್‌ಗಿಂತ ಕಮ್ಮಿ ಇರುವ ಪ್ಲಾಸ್ಟಿಕ್ ಅಥವಾ ಪಿವಿಸಿ ಬ್ಯಾನರ್‌ಗಳು ಮತ್ತು ಸ್ಟಿಕರ್‌ಗಳು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries