HEALTH TIPS

ಶ್ರೀಲಂಕಾ ಪ್ರವಾಸ: ಮೊದಲ ಟಿ20ಯಲ್ಲಿ 34 ರನ್ ಗಳ ಅಂತರದಲ್ಲಿ ಗೆದ್ದ ಭಾರತ ವನಿತೆಯರು!

 ದಂಬುಲಾ: ಇಂದಿನಿಂದ ಆರಂಭವಾಗಿರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ವನಿತೆಯರ ಕ್ರಿಕೆಟ್ ತಂಡ ತನ್ನ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವನಿತೆಯರ ತಂಡವನ್ನು 34 ರನ್ ಗಳ ಅಂತರದಲ್ಲಿ ಮಣಿಸಿದೆ.

ದಂಬುಲಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶಫಾಲಿ ವರ್ಮಾ (31 ರನ್), ನಾಯಕಿ ಹರ್ಮನ್ ಪ್ರೀತ್ ಕೌರ್ (22 ರನ್) ಮತ್ತು ರಾಡ್ರಿಗಸ್ (ಅಜೇಯ 36)ರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 138ರನ್ ಗಳಿಸಿತು. 

ಈ ಸವಾಲಿನ ಮೊತ್ತವನ್ನು ಬೆನ್ನು ಹತ್ತಿದ ಶ್ರೀಲಂಕಾ ವನಿತೆಯರ ತಂಡ ಭಾರತದ ಕರಾರುವಕ್ಕಾದ ಬೌಲಿಂಗ್ ದಾಳಿಯಿಂದಾಗಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 104 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 34 ರನ್ ಗಳ ಅಂತರದಲ್ಲಿ ಸೋಲುಂಡಿತು. ಈ ಗೆಲುವಿನ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 1–0 ರಲ್ಲಿ ಮುನ್ನಡೆ ಗಳಿಸಿತು.

 ಬೌಲಿಂಗ್ ನಲ್ಲಿ ರಾಧಾ ಯಾದವ್ 2 ವಿಕೆಟ್ ಕಬಳಿಸಿದರೆ, ಶಫಾಲಿ ವರ್ಮಾ, ಪೂಜಾ ವಸ್ತ್ರಾಕರ್ ಮತ್ತು ದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದರು. ಭಾರತದ ಪರ ಅಜೇಯ ಆಟವಾಡಿ ಸವಾಲಿನ ಮೊತ್ತಕ್ಕೆ ಕಾರಣರಾದ ಜೆಮಿಮಾ ರಾಡ್ರಿಗಸ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries