ಕುಂಬಳೆ: ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಿಂಶತಿ ಉತ್ಸವದ ಅಂಗವಾಗಿ ಪೆÇ್ರ.ಎ.ಶ್ರೀನಾಥ್, ಡಾ.ಮಂಜುಳಾ, ರೇಖಾ ಸುದೇಶ್ ರಾವ್ ಅವರಿಗೆ ಕನ್ನಡ ಗ್ರಂಥಾಲಯದ ಸಭಾ ಭÀವನದಲ್ಲಿ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಭವನದ ಸ್ಥಾಪಕ ವಾಮನ ರಾವ್ ಬೇಕಲ್, ಕೋಶಾಧಿಕಾರಿ ಸಂಧ್ಯಾರಾಣಿ ಅವರು ಪೆÇ್ರ.ಎ.ಶ್ರೀನಾಥ್, ಡಾ.ಮಂಜುಳಾ, ರೇಖಾ ಸುದೇಶ್ ರಾವ್ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸಮ್ಮಾನಿಸಿ ಗೌರವಿಸಿದರು.
ಕನ್ನಡ ಭವನದ ಗೌರವಾಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘದ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ದೋಣಿಬಾಗಿಲು ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕವಯತ್ರಿ ಪ್ರಮೀಳಾ ಚುಳ್ಳಿಕ್ಕಾನ, ಬಿಇಎಂ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ರಾಜೇಶ್ಚಂದ್ರ ಕೆ.ಪಿ. ಉಪಸ್ಥಿತರಿದ್ದರು. ಲೇಖಕ ನರಸಿಂಹ ಮಂಗಳೂರು, ಉಷಾ ಟೀಚರ್ ಪಾರೆಕಡವು, ಸತೀಶ್ ಕೆ.ಕೂಡ್ಲು, ಪ್ರಭಾಕರ ರಾವ್ ಪಳ್ಳಿಕ್ಕೆರೆ ಮೊದಲಾದವರಿದ್ದರು.
ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ಸ್ಥಾಪಕ ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು.

