ಮುಳ್ಳೇರಿಯ: ಜೂ.24ರಂದು ಬೆಳಗ್ಗೆ 10.30ಕ್ಕೆ ಕಾಸರಗೋಡು ಪವರ್ ಹೌಸ್ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಕಾಸರಗೋಡು ಪವರ್ ಹೌಸ್ ಹಾಗೂ ಮುಳ್ಳೇರಿಯ ಎಲೆಕ್ಟ್ರಿಕಲ್ ವಿಭಾಗದ ಕಚೇರಿ ಕಟ್ಟಡವನ್ನು ವಿದ್ಯುತ್ ಸಚಿವ ಕೆ.ಕೃಷ್ಣನ್‍ಕುಟ್ಟಿ ಉದ್ಘಾಟಿಸಲಿದ್ದಾರೆ. ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ರಾಜಮೋಹನ್ ಉಣ್ಣಿತ್ತಾನ್ ಭಾಗವಹಿಸುವರು. ಜಿಲ್ಲೆಯ ಶಾಸಕರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಜಿಲ್ಲಾಧಿಕಾರಿ, ನಗರಸಭೆ ಅಧ್ಯಕ್ಷರು, ತ್ರಿಸ್ಥರ ಪಂಚಾಯಿತಿ ಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಿದ್ಯುತ್ ಮಂಡಳಿಯ ಹಿರಿಯ ಅಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ.




