HEALTH TIPS

ಮಧ್ಯಪ್ರದೇಶ: ಆರೋಗ್ಯಾಧಿಕಾರಿ ವಿರುದ್ಧ 50 ದಾದಿಯರಿಂದ ಲೈಂಗಿಕ ಕಿರುಕುಳ ಆರೋಪ!

 ಭೋಪಾಲ್: ಇಲ್ಲಿನ ಅತಿ ದೊಡ್ಡ ಸರ್ಕಾರಿ ವೈದ್ಯಕೀಯ ಸಂಸ್ಥೆ ಹಮಿದಿಯಾ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ.ದೀಪಕ್‌ ಮರವಿ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಕನಿಷ್ಠ 50 ದಾದಿಯರು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಆರೋಗ್ಯ ಶಿಕ್ಷಣ ಸಚಿವ ವಿಶ್ವಾಸ್‌ ಸಾರಂಗ್‌, 'ಡಾ.ದೀಪಕ್‌ ಮರವಿ ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆಗೆ ಆದೇಶಿಸಲಾಗಿದೆ' ಎಂದು ತಿಳಿಸಿದ್ದಾರೆ. ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಲು ಡಾ.ಮರವಿ ನಿರಾಕರಿಸಿದ್ದಾರೆ.

ಈ ನಡುವೆ ಮಧ್ಯ ಪ್ರದೇಶ ಮಾನವ ಹಕ್ಕುಗಳ ಆಯೋಗ 10 ದಿನಗಳ ಒಳಗಾಗಿ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಆರೋಗ್ಯ ಆಯುಕ್ತರಿಗೆ ನೋಟಿಸ್ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries