HEALTH TIPS

ಜಿಎಸ್​ಟಿ ಸಭೆ ಮೇಲಿದೆ ದೇಶದ ಆರ್ಥಿಕ ವಲಯದ ಗಮನ; ವಿತ್ತ ಸಚಿವರ ಅಧ್ಯಕ್ಷತೆ

 ನವದೆಹಲಿ: ದೇಶದ ಆರ್ಥಿಕತೆಯ ದಿಕ್ಕನ್ನು ನಿರ್ಧರಿಸುವಂಥ ಮಹತ್ವದ ಸಭೆಯೊಂದು ಆರಂಭಗೊಂಡಿದ್ದು, ಭಾರತದ ಆರ್ಥಿಕ ವಲಯದ ಗಮನ ಈ ಸಭೆಯ ಮೇಲಿದ್ದು, ಆರ್ಥಿಕ ಪರಿಣತರು ಮತ್ತು ಉದ್ಯಮ ಕ್ಷೇತ್ರದ ಮಂದಿ ಇದರ ನಿರ್ಣಯಗಳತ್ತ ಕುತೂಹಲಭರಿತ ನಿರೀಕ್ಷೆ ಹೊಂದಿದ್ದಾರೆ.

ಹೌದು.. ಸರಕು ಮತ್ತು ಸೇವಾ ತೆರಿಗೆ ಪದ್ಧತಿಯಲ್ಲಿ (ಜಿಎಸ್​ಟಿ) ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ನಿರೀಕ್ಷಿಸಲಾಗಿರುವ ಜಿಎಸ್​ಟಿ ಮಂಡಳಿಯ 47ನೇ ಸಭೆ ಚಂಡೀಗಢದಲ್ಲಿ ನಿನ್ನೆ  ಆರಂಭಗೊಂಡಿದ್ದು, ಇಂದೂ ನಡೆಯಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದಾರೆ.

ರಾಜ್ಯಗಳಿಗೆ ತೆರಿಗೆ ಸಂಗ್ರಹದಲ್ಲಾಗುತ್ತಿರುವ ಕೊರತೆಗೆ ಪರಿಹಾರ ನೀಡಿಕೆ ನಿರ್ಧಾರವನ್ನು ಈ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಕೆಲವು ವಸ್ತುಗಳ ತೆರಿಗೆ ಏರಿಕೆ ಹಾಗೂ ತೆರಿಗೆ ಸ್ಲ್ಯಾಬ್​ಗಳ ವಿಲೀನದ ಬಗ್ಗೆ ನಿರ್ಣಯವಾಗುವ ಸಾಧ್ಯತೆಯೂ ಇದೆ ಎಂದು ನಿರೀಕ್ಷಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries