ಕುಂಬಳೆ : ವಿಶ್ವ ಯೋಗ ದಿನದ ಅಂಗವಾಗಿ ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ವತಿಯಿಂದ ಕುಂಬಳೆ ಮಾಧವ ಪೈ ಸಭಾ ಭವನದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಕುಂಬಳೆ ಪಂಚಾಯತಿ ಘಟಕದ ಅಧ್ಯಕ್ಷ ಸುಜಿತ್ ರೈ ಅ|ಧ್ಯಕ್ಷತೆ ವಹಿಸಿದ್ದರು. ಕುಂಬಳೆ ಮಂಡಲ ಬಿಜೆಪಿ ಅಧ್ಯಕ್ಷ ಸುನಿಲ್ ಅನಂತಪುರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯೋಗದ ಮಹತ್ವವನ್ನು ಯೋಗ ಅಭ್ಯಾಸವನ್ನು ರಾಷ್ಟ್ರೀಯ ಸ್ವಯಂಸೇವಾ ಸಂಘದ ಮಾಜಿ ಪ್ರಚಾರಕ, ಹಿರಿಯ ಸ್ವಯಂ ಸೇವಕ, ಯೋಗಪಟು ಸಂಜೀವ ಕಂಚಿಕಟ್ಟೆ ಇವರು ತಿಳಿಸಿದರು.ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಮುರಳೀಧರ ಯಾದವ್ ಸ್ವಾಗತಿಸಿ, ಬಿಜೆಪಿ ಪಂಚಾಯತಿ ಪ್ರಧಾನ ಕಾರ್ಯದರ್ಶಿ ಜಿತೇಶ್ ನಾೈಕಾಪು ವಂದಿಸಿದರು.

.jpg)
