HEALTH TIPS

ಕೇಂದ್ರ ಸರ್ಕಾರ ದೆಹಲಿಯನ್ನು ಆಧುನೀಕರಿಸುತ್ತಿದೆ: ಮೋದಿ

 ನವದೆಹಲಿ: ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಆಧುನಿಕ ಅಭಿವೃದ್ಧಿ ಕಾರ್ಯಗಳ ಮೂಲಕ ದೆಹಲಿಯ ರೂಪವನ್ನು ಬದಲಾಯಿಸುತ್ತಿದ್ದು, ರಾಷ್ಟ್ರ ರಾಜಧಾನಿಯನ್ನು ಆಧುನೀಕರಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪ್ರತಿಪಾದಿಸಿದ್ದಾರೆ.

ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗ ಮಾರ್ಗ ಮತ್ತು ಐದು ಅಂಡರ್‌ಪಾಸ್‌ಗಳನ್ನು ಉದ್ಘಾಟಿಸಿದ ನಂತರ, 'ಕೇಂದ್ರ ಸರ್ಕಾರದ ಮೂಲಕ ದೆಹಲಿಗೆ ಉತ್ತಮ ಮೂಲಭೂತ ಸೌಕರ್ಯಗಳು ದೊರಕಿವೆ. ಈ ಯೋಜನೆಯು 55 ಲಕ್ಷ ಲೀಟರ್ ಇಂಧನವನ್ನು ಉಳಿಸಲು ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ' ಎಂದು ಹೇಳಿದರು.

'ಪ್ರಾದೇಶಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ, ದೆಹಲಿ-ಎನ್‌ಸಿಆರ್ (ರಾಷ್ಟ್ರೀಯ ರಾಜಧಾನಿ ಪ್ರದೇಶ) ಮತ್ತು ದೆಹಲಿ-ಮೀರತ್ ಹೆದ್ದಾರಿಯಲ್ಲಿ ಮೆಟ್ರೋ ಮಾರ್ಗಗಳನ್ನು ದ್ವಿಗುಣಗೊಳಿಸುವುದಕ್ಕೆ ಬದಲಾಗಿ ಪೂರ್ವ ಮತ್ತು ಪಶ್ಚಿಮ ದಿಕ್ಕಿನಲ್ಲಿ ಹೆಚ್ಚು ಬಾಹ್ಯ ಹೆದ್ದಾರಿಗಳನ್ನು ನಿರ್ಮಿಸಬೇಕು. ಸರ್ಕಾರವು ಹೆಚ್ಚುತ್ತಿರುವ ನಗರೀಕರಣವನ್ನು ಒಂದು ಅವಕಾಶವಾಗಿ ನೋಡುತ್ತಿದೆ. ಜನರಿಗೆ ಮೂಲಭೂತ ಸೌಕರ್ಯವನ್ನು ಹೆಚ್ಚಿಸಲು ಕೆಲಸ ಮಾಡುತ್ತಿದೆ' ಎಂದರು.

ಸದ್ಯ ನಿರ್ಮಾಣವಾಗುತ್ತಿರುವ 1.6 ಕಿಮೀ ಉದ್ದದ ಸುರಂಗ ಮಾರ್ಗವು ದೆಹಲಿಯಲ್ಲೇ ಮೊದಲನೆಯದು. ದೆಹಲಿಯ ಪೂರ್ವ ಭಾಗ, ನೋಯ್ಡಾ ಮತ್ತು ಗಾಜಿಯಾಬಾದ್‌ನಿಂದ ಇಂಡಿಯಾ ಗೇಟ್ ಹಾಗೂ ದೆಹಲಿಯ ಇತರ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries