ಬದಿಯಡ್ಕ: ಕಿಳಿಂಗಾರು ಎ.ಎಲ್.ಪಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀವಿದ್ಯಾ ಯೋಗ ದಿನದ ಮಹತ್ವವನ್ನು ವಿವರಿಸಿದರು. ಶಾಲಾ ಅಧ್ಯಾಪಕ ಪ್ರದೀಪ್ ಕುಮಾರ್ ಶೆಟ್ಟಿ, ಅಧ್ಯಾಪಿಕೆ ಸಹನಾ ಯೋಗಾಭ್ಯಾಸಗಳನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿದರು. ಅಧ್ಯಾಪಿಕೆಯರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.




.jpg)
.jpg)
.jpg)
