ಬದಿಯಡ್ಕ: ಚಿನ್ಮಯ ವಿದ್ಯಾಲಯ ಬದಿಯಡ್ಕದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಮಾನಸ ಯೋಗದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಹಾಗೂ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಸಿಕೊಟ್ಟರು. ಶಾಲೆಯ ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಜಿಲ್ಲಾಮಟ್ಟದ ವಿಶ್ವ ಯೋಗ ದಿನಾಚರಣೆ ಬೇಕಲಕೋಟೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಬದಿಯಡ್ಕ ಚಿನ್ಮಯ ವಿದ್ಯಾಲಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

.jpg)
.jpg)
