ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸಂಸದ ರಾಜಮೋಹನ್ ಉಣ್ಣಿತ್ತಾನ್ ನೇತೃತ್ವದಲ್ಲಿ ಸಭೆ ನಡೆಯಿತು. ಕಾಸರಗೋಡು ವಿಧಾನಸಭಾ ಕ್ಷೇತ್ರದ ಮೊಗ್ರಾಲ್ ಸೇತುವೆಯಿಂದ ಸೌತ್ ಬೀಚ್ ವರೆಗಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆ ಮತ್ತು ದೂರುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಇಲಾಖಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶಾಸಕ ಎನ್.ಎ.ನೆಲ್ಲಿಕುನ್ನು, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್, ಕಣ್ಣೂರು ಎನ್.ಎಚ್.ಎ.ಐ ಯೋಜನಾ ನಿರ್ದೇಶಕ ಪುನೀಲ್ ಕುಮಾರ್, ಕಾಸರಗೋಡು ನಗರಸಭೆ ಅಧ್ಯಕ್ಷ ನ್ಯಾಯವಾದಿ. ವಿ.ಎಂ.ಮುನೀರ್ ಮಾತನಾಡಿದರು.
ಮಂಜೇಶ್ವರ ಕ್ಷೇತ್ರದಲ್ಲಿ ತಲಪ್ಪಾಡಿಯಿಂದ ಮೊಗ್ರಾಲ್ ಸೇತುವೆ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಯ ಬಗ್ಗೆಯೂ ಚರ್ಚಿಸಲು ಸಭೆ ಕರೆಯಲಾಗಿತ್ತು. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ದೂರು ಮತ್ತು ಸಲಹೆಗಳನ್ನು ಎನ್‍ಎಚ್‍ಎಐ ಪ್ರತಿನಿಧಿಗೆ ತಿಳಿಸಿದರು.


