ಉಪ್ಪಳ: ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಪ್ರವೇಶೋತ್ಸವ ಜರಗಿತು. ಪೈವಳಿಕೆ ಗ್ರಾಮ ಪಂಚಾಯತಿ ಸದಸ್ಯ ಅಬ್ದುಲ್ಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ದೇವಕಾನ ಅಧ್ಯಕ್ಷತೆ ವಹಿಸಿದ್ದರು. ಒಂದನೇ ತರಗತಿಯ ವಿದ್ಯಾರ್ಥಿಗಳಿಂದ ಅಕ್ಷರ ದೀಪ ಬೆಳಗಿಸಲಾಯಿತು. ಡಿ ವೈ ಎಫ್ ಐ ಪೈವಳಿಕೆ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕೋಪಕರಣ ವಿತರಿಸಲಾಯಿತು. ಪೈವಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ರಸಾಕ್ ಚಿಪ್ಪಾರ್, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿ ಅಸೀಸ್ ಮರಿಕ್ಕೆ, ಮದರ್ ಪಿಟಿಎ ಅಧ್ಯಕ್ಷೆ ಸರೋಜ, ಆದಂ ಬಳ್ಳೂರು, ಅಬ್ದುಲ್ಲ ಕುಞÂ್ಞ, ಪವಿತ್ರ ಬಲ್ಲಾಳ್, ರವೀಂದ್ರನಾಥ್ ಕೆ ಆರ್, ಆರೋಗ್ಯ ಇಲಾಖೆಯ ನರ್ಸ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಇಬ್ರಾಹಿಂ ಬುಡ್ರಿಯ ಸ್ವಾಗತಿಸಿ, ನೌಕರ ಸಂಘದ ಕಾರ್ಯದರ್ಶಿ ಅಬ್ದುಲ್ ಲತೀಫ್ ಕೊಕ್ಕೆಚಾಲ್ ವಂದಿಸಿದರು. ಪ್ರವೀಣ್ ಕನಿಯಾಲ ನಿರೂಪಿಸಿದರು. ಚಿನ್ಮಯಿ ಪ್ರಾರ್ಥನೆ ಹಾಡಿದರು. ಸಿಹಿತಿಂಡಿ ವಿತರಿಸಲಾಯಿತು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

.jpg)
