HEALTH TIPS

ನಮಾಜ್​ ನಂತರ ದ್ವೇಷ ಭಾಷಣ ಮಾಡಬೇಡಿ ಎಂದಿದ್ದಕ್ಕೆ ಇನ್ಸ್​ಪೆಕ್ಟರ್​ ರಾತ್ರೋರಾತ್ರಿ ಎತ್ತಂಗಡಿ!

              ಹಿಂದೂ ದೇವರಿಗೆ ಅವಹೇಳನ ಮಾಡಿದ್ದನ್ನು ವಿರೋಧಿಸಿ ಪ್ರವಾದಿ ಮೊಹಮ್ಮದ್​ ಅವರ ಕುರಿತು ಮಾತನಾಡಿದ ಕಾರಣಕ್ಕೆ ಬಿಜೆಪಿಯ ಮಾಜಿ ವಕ್ತಾರೆ ನೂಪುರ್​ ಶರ್ಮಾ ವಿರುದ್ಧ ದೇಶ-ವಿದೇಶಗಳಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ, ನಮಾಜ್​ ನಂತರ ದ್ವೇಷ ಭಾಷಣ ಮಾಡದಂತೆ ಹೇಳಿದ ಪೊಲೀಸ್​ ಇನ್ಸ್​ಪೆಕ್ಟರ್​ ಒಬ್ಬರನ್ನು ರಾತ್ರೋರಾತ್ರಿ ವರ್ಗ ಮಾಡಲಾಗಿದೆ!

             ಈ ಘಟನೆ ನಡೆದಿರುವುದು ಕೇರಳದಲ್ಲಿ. ಶುಕ್ರವಾರದ ನಮಾಜ್ ನಂತರ ಮಸೀದಿಯಲ್ಲಿ ದ್ವೇಷ ಭಾಷಣ ಮಾಡದಂತೆ ಮಸೀದಿ ಕಮಿಟಿಗೆ ನೋಟಿಸ್​ ನೀಡಿದ್ದ ಕಣ್ಣೂರು ಮಯ್ಯಿಲ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಗಿದ್ದ ಬಿಜು ಪ್ರಕಾಶ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಕೋಮು ಸೌಹಾರ್ದ ಹಾಳು ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನೋಟಿಸ್​ನಲ್ಲಿ ಇನ್ಸ್​ಪೆಕ್ಟರ್​ ಎಚ್ಚರಿಸಿದ್ದರು.

                   ಈ ನೋಟಿಸ್​ ವಿರುದ್ಧ ಮುಸ್ಲಿಂನ ಕೆಲ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಸಮ್ಸಾಥಾ ಜಮಾಯುತ್​-ಉಲ್ ಉಲೇಮಾ ಸಂಘಟನೆ, ಮುಸ್ಲಿಂ ಲೀಗ್ ಹಾಗೂ ಎಸ್​ಡಿಪಿಐ ಸೇರಿದಂತೆ ಕೆಲವು ಸಂಘಟನೆಗಳು ನೋಟಿಸ್​ ಅನ್ನು ಖಂಡಿಸಿದ್ದವು. ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಲೀಗ್ ಆಗ್ರಹಿಸಿವೆ. ಸುನ್ನಿ ಮಹಲ್ ಫೆಡರೇಶನ್ ಈ ಬಗ್ಗೆ ತನಿಖೆಯಾಗಲಿ ಎಂದು ಹೇಳಿದೆ. ಪೊಲೀಸ್ ಅಧಿಕಾರಿ ತಮಗೆ ಅವಮಾನ ಮಾಡಿರುವುದಾಗಿ ಸಂಘಟನೆಗಳು ಆಕ್ರೋಶ ಹೊರಹಾಕಿವೆ.

                 ಇನ್ನೊಂದೆಡೆ, ಇನ್ಸ್​ಪೆಕ್ಟರ್​ ಅವರನ್ನು ವರ್ಗ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ ಸರ್ಕಾರ, 'ಸ್ಟೇಷನ್ ಹೌಸ್ ಆಫೀಸರ್ ಸರ್ಕಾರದ ನಿಯಮಕ್ಕೆ ವಿರುದ್ಧವಾಗಿ ನೋಟಿಸ್ ಕಳುಹಿಸಿದ್ದಾರೆ. ಹಾಗಾಗಿ ಅವರಿಗೆ ವರ್ಗ ಮಾಡಿದ್ದೇನೆ ಎಂದಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries