ತಿರುವನಂತಪುರ: ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುತ್ತಿದೆ.ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಸಕ್ರಿಯವಾಗಿರುವ ಮಾನ್ಸೂನ್ ಮಾರುತಗಳಿಂದಾಗಿ ಮಳೆಯಾಗಿದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಿದೆ. ಉತ್ತರ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯೂ ಇದೆ.
ಕೇರಳ-ಲಕ್ಷದ್ವೀಪ ಕರಾವಳಿಯಲ್ಲಿ 29-06-2022 ರಿಂದ 04-07-2022 ಮತ್ತು ಕರ್ನಾಟಕ ಕರಾವಳಿಯಲ್ಲಿ 29-06-2022 ರಿಂದ 02-07-2022 ರವರೆಗೆ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:
30-06-2022: ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
01-07-2022: ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
02-07-2022: ಅಲಪ್ಪುಳ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
03-07-2022: ಅಲಪ್ಪುಳ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
ಎಂಬೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

