ಕೋಲ್ಕತ್ತ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ವಿರುದ್ಧ ಪ್ರತಿಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಬಗ್ಗೆ ಅಪಸ್ವರಗಳು ಕೇಳಿಬಂದಿವೆ.
0
samarasasudhi
ಜೂನ್ 25, 2022
ಕೋಲ್ಕತ್ತ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ವಿರುದ್ಧ ಪ್ರತಿಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಬಗ್ಗೆ ಅಪಸ್ವರಗಳು ಕೇಳಿಬಂದಿವೆ.
ರಾಷ್ಟ್ರಪತಿ ಹುದ್ದೆಗೆ ಯಶವಂತ ಸಿನ್ಹಾ ಅವರು ಉತ್ತಮ ಅಭ್ಯರ್ಥಿಯಲ್ಲ.
ಅಭ್ಯರ್ಥಿ ಆಯ್ಕೆ ಕುರಿತು ಬೇಸರಗೊಂಡಿದ್ದೇನೆ. ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ತಪ್ಪು ಎಂದು ಹೇಳುತ್ತಿಲ್ಲ. ಆದರೆ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಿತ್ತು ಎಂದು ಭಟ್ಟಾಚಾರ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು ಸೇರಿದಂತೆ 17 ಪಕ್ಷಗಳು ಒಮ್ಮತದಿಂದ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ.
ಎಡಪಕ್ಷಗಳು ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರತ್ಯೇಕಿಸುವುದಿಲ್ಲ. ಜೊತೆಯಾಗಿ ಹೋರಾಡುತ್ತೇವೆ. ಎಡಪಕ್ಷಗಳ ಸದಸ್ಯರ ಸಂಖ್ಯೆ ಕಡಿಮೆಯಿದೆ. ಬೇರೆ ಪಕ್ಷಗಳ ಅಭಿಪ್ರಾಯಗಳನ್ನು ಒಪ್ಪುತ್ತೇವೆ ಎಂದು ಭಟ್ಟಾಚಾರ್ಯ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಸಿಪಿಐ(ಎಂ)ನ ಮೂರು, ಸಿಪಿಐ ಹಾಗೂ ಆರ್‌ಎಸ್‌ಪಿಯ ತಲಾ ಒಂದು ಸದಸ್ಯ ಬಲವಿದೆ. ರಾಜ್ಯಸಭೆಯಲ್ಲಿ ಸಿಪಿಐ(ಎಂ) ಐದು, ಸಿಪಿಐನ ಎರಡು ಸದಸ್ಯ ಬಲವಿದೆ.