ತಿರುವನಂತಪುರ: ರಾಜಧಾನಿಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸುವ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ನಿಷೇಧ ಹೇರಲಾಗಿದೆ.
ಪಕ್ಷದ ಕಾರ್ಯಕ್ರಮವಾದ್ದರಿಂದ ಮಾಧ್ಯಮಗಳಿಗೆ ಪ್ರವೇಶ ನೀಡಿಲ್ಲ ಎಂದು ಅಕಾಡೆಮಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
ಇದೇ ವೇಳೆ ಸಿಎಂ ಸಾಗುವ ಮಾರ್ಗದುದ್ದಕ್ಕೂ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಜಧಾನಿಯಲ್ಲಿ ನಡೆಯುತ್ತಿರುವ ಘರ್ಷಣೆ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರು ಸೂಚಿಸಿದ್ದಾರೆ.ಇದರ ಭಾಗವಾಗಿ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಹೆಚ್ಚಿನ ಶಸ್ತ್ರಸಜ್ಜಿತ ಪೊಲೀಸರನ್ನು ನಿಯೋಜಿಸಲಾಗಿದೆ.