ನವದೆಹಲಿ: ಸೆಂಟ್ರಲ್ ವಿಸ್ತಾ ಅವೆನ್ಯೂ ಪುನರ್ ಅಭಿವೃದ್ಧಿ ಯೋಜನೆಯಡಿ ವಿಜಯ ಚೌಕ್‌ನಿಂದ ಇಂಡಿಯಾ ಗೇಟ್ ವರೆಗಿನ ಕಾಮಗಾರಿಯನ್ನು ಇದೇ 18ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.
0
samarasasudhi
ಜುಲೈ 07, 2022
ನವದೆಹಲಿ: ಸೆಂಟ್ರಲ್ ವಿಸ್ತಾ ಅವೆನ್ಯೂ ಪುನರ್ ಅಭಿವೃದ್ಧಿ ಯೋಜನೆಯಡಿ ವಿಜಯ ಚೌಕ್‌ನಿಂದ ಇಂಡಿಯಾ ಗೇಟ್ ವರೆಗಿನ ಕಾಮಗಾರಿಯನ್ನು ಇದೇ 18ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.
'ಒಂದೆರಡು ಅಂಡರ್‌ಪಾಸ್‌ಗಳಲ್ಲಿ ಕೆಲ ಸಣ್ಣ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ, ಪುನರ್ ಅಭಿವೃದ್ಧಿ ಕಾಮಗಾರಿಯನ್ನು ಜುಲೈ 15 ಅಥವಾ 18ರ ಒಳಗಾಗಿ ಪೂರ್ಣಗೊಳಿಸಲಾಗುವುದು' ಎಂದರು.
ಸೆಂಟ್ರಲ್ ವಿಸ್ತಾ ಪುನರ್‌ಅಭಿವೃದ್ಧಿ ಯೋಜನೆಯು ತ್ರಿಕೋನಾಕಾರದ ನೂತನ ಸಂಸತ್ ಭವನ, ವಿಜಯ ಚೌಕ್‌ನಿಂದ ಇಂಡಿಯಾ ಗೇಟ್ ವರೆಗಿನ 3 ಕಿ.ಮೀ. ಉದ್ದದ ರಾಜಪಥದ ಅಭಿವೃದ್ಧಿ, ಪ್ರಧಾನಿಯ ನೂತನ ನಿವಾಸ, ಕಚೇರಿ ಹಾಗೂ ಉಪರಾಷ್ಟ್ರಪತಿಗಳ ನೂತನ ಕಚೇರಿ ಸಂಕೀರ್ಣ ನಿರ್ಮಾಣವನ್ನು ಒಳಗೊಂಡಿದೆ.