HEALTH TIPS

ಲಾಲು ಪ್ರಸಾದ್ ಯಾದವ್ ಏಮ್ಸ್ ಗೆ ಏರ್‌ಲಿಫ್ಟ್‌; ಆರ್‌ಜೆಡಿ ಮುಖ್ಯಸ್ಥನ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

            ಪಾಟ್ನಾ: ಮನೆಯಲ್ಲಿ ಬಿದ್ದು ಬಲ ಭುಜದ ಮೂಳೆ ಮುರಿತಕ್ಕೊಳಗಾದ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

               ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ವಿಚಾರಿಸಿದ್ದಾರೆ.

                 ಮಂಗಳವಾರ ಪ್ರಧಾನಿ ಮೋದಿ ಅವರು ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡಿ, ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಆರ್‌ಜೆಡಿ ಮುಖ್ಯಸ್ಥರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಹಾರೈಸಿದರು ಎಂದು ಆರ್‌ಜೆಡಿ ವಕ್ತಾರ(ಬಿಹಾರ) ಚಿತ್ರರಂಜನ್ ಗಗನ್ ಅವರು ಹೇಳಿದ್ದಾರೆ.

                ಲಾಲು ಪ್ರಸಾದ್ ಯಾದವ್ ಅವರು ಕಳೆದ ಭಾನುವಾರ ಪಾಟ್ನಾದ 10 ಸರ್ಕ್ಯುಲರ್ ರಸ್ತೆಯಲ್ಲಿರುವ ತಮ್ಮ ಮನೆಯ ಮೆಟ್ಟಿಲು ಮೇಲಿಂದ ಬಿದ್ದು ಬಲ ಭುಜದ ಮೂಳೆ ಮುರಿದುಕೊಂಡಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries