HEALTH TIPS

ನೀರಿನ ಸಮಸ್ಯೆ ಬಗೆಹರಿಸುವರೆಗೂ ಹನಿಮೂನ್​ಗೇ ಹೋಗಲ್ಲ ಎಂದು ಪಟ್ಟು ಹಿಡಿದ ನವದಂಪತಿ!

             ಕೋಲ್ಹಾಪುರ: ಹಳ್ಳಿಗಳಲ್ಲಿ ಇಂದಿಗೂ ಕುಡಿಯುವ ನೀರಿನ ಸಮಸ್ಯೆ ಕಾಣಬಹುದು. ನೀರಿಗಾಗಿ ದಿನನಿತ್ಯ ಜಗಳಗಳೂ, ಪ್ರತಿಭಟನೆಗಳೂ ಕೂಡ ನಡೆಯುತ್ತಿರುತ್ತವೆ. ಆದರೆ ಇಲ್ಲೊಂದು ನವದಂಪತಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿಕೊಡಬೇಕೆಂದು ತಮ್ಮ ಹನಿಮೂನ್​ ಅನ್ನೇ ತ್ಯಾಗ ಮಾಡಿರುವ ಅಪರೂಪದ ಘಟನೆ ಮಹಾರಾಷ್ಟ್ರದ ಕೋಲ್ಹಾಪುರದಲ್ಲಿ ನಡೆದಿದೆ.

           ನಿನ್ನೆಯಷ್ಟೇ ಹೊಸಜೀವನಕ್ಕೆ ಕಾಲಿಟ್ಟ ಈ ದಂಪತಿಯನ್ನು ಮೆರವಣಿಗೆ ಮಾಡಲಾಯಿತು. ಈ ವೇಳೆ ತಾವು ಮೆರವಣಿಗೆ ಹೊರಟಿದ್ದ ವಾಹನದ ಮೇಲೆ ನೀರಿನ ಸಮಸ್ಯೆ ಬಗೆಹರಿಸುವವರೆಗೂ ನಾವು ಹನಿಮೂನ್​ಗೆ ಹೋಗಲ್ಲ ಎಂದು ಬರೆಯಲಾಗಿತ್ತು.

              ಮದುವೆ ವರದಕ್ಷಿಣೆ ರೂಪದಲ್ಲಿ ನೀರಿನ ಟ್ಯಾಂಕ್ ಪಡೆಯಲಾಗಿದ್ದು, ನೀರಿನ ಸಮಸ್ಯೆ ಬಗೆಹರಿಸದ ಮಹಾನಗರ ಪಾಲಿಕೆ ವಿರುದ್ಧ ಈ ರೀತಿ ಆಕ್ರೋಶ ಹೊರಹಾಕಿದ್ದಾರೆ. ಇಲ್ಲಿನ ಪೇಟೆ ಬಡಾವಣೆಯಲ್ಲಿ ಕಳೆದ ಆರು ತಿಂಗಳಿನಿಂದ ನೀರು ಸಿಗದೇ ಜನರು ಪರದಾಡುತ್ತಿದ್ದಾರೆ. ಇದರಿಂದ ಬೇಸತ್ತ ಈ ನವಜೋಡಿ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಈ ಮೂಲಕ ಒತ್ತಾಯಿಸಿದ್ದಾರೆ.

ವಿಶಾಲ್​​ ಹಾಗೂ ಅಪರ್ಣಾ ಈ ನವದಂಪತಿ ಈಗ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಪಟ್ಟು ಹಿಡಿದು ಕುಳಿತಿದ್ದಾರೆ. ವಿಶಾಲ್​ ವರದಕ್ಷಿಣೆ ರೂಪದಲ್ಲಿ ನೀರಿನ ಟ್ಯಾಂಕರ್​ ಕೊಡಿಸಬೇಕೆಂದು ಮಾಡಿದ್ದ ಮನವಿಯಂತೆ ಟ್ಯಾಂಕರ್​​ಅನ್ನು ಕೊಡಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries