ಕಾಸರಗೋಡು: ರಾಜ್ಯ ಸರ್ಕಾರದ ಮೂಲಕ ಜಾರಿಗೊಳಿಸಲಾಗುತ್ತಿರುವ ಎಲ್ಲ ಕೇಂದ್ರಾವಿಷ್ಕøತ ಯೋಜನೆಗಳನ್ನು ಕೇರಳದಲ್ಲಿ ಬುಡಮೇಲುಗೊಳಿಸಲಾಗುತ್ತಿದೆ. ಕೇಂದ್ರದ ಯೋಜನೆಗಳ ಸಮರ್ಪಕ ಜಾರಿಗಾಗಿ ಅವಲೋಕನ ನಡೆಸಲು ಕೇಂದ್ರ ಸಚಿವರು ರಾಜ್ಯಕ್ಕೆ ಆಗಮಿಸುತ್ತಿರುವುದು ಸಿಎಂ ಪಿಣರಾಯಿ ವಿಜಯನ್ ಹಾಗೂ ಲೋಕೋಪಯೋಗಿ ಸಚಿವ ಮೊಹಮ್ಮದ್ ರಿಯಾಜ್ ಅವರಲ್ಲಿ ತಲ್ಲಣಕ್ಕೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹೇಳಿದರು.
ಅವರು ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿಯಲ್ಲಿ ನಿನ್ನೆ ನಡೆದ ಸುದ್ದಿಗೋಷ್ಠೀಯಲ್ಲಿ ಮಾತನಾಡಿದರು.
ಮಂಗಳೂರಿನಿಂದ ತಿರುವನಂತಪುರದವರೆಗೆ ಹೈಸ್ಪೀಡ್ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಡೆಯುತ್ತಿದ್ದು, ಈ ಎಲ್ಲಾ ಯೋಜನೆಗಳು 2024 ರ ವೇಳೆಗೆ ಪೂರ್ಣಗೊಳ್ಳಲಿವೆ. ಯುಪಿಎ ಸರ್ಕಾರದ ಅವಧಿಗಿಂತ 560 ಪಟ್ಟು ಹೆಚ್ಚಿನ ವೇಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಕೇರಳದಲ್ಲಿ ನಡೆಯುತ್ತಿದೆ. ಈ ಹಿಂದೆ ರಾಜ್ಯಕ್ಕೆ ಮಂಜೂರಾಗಿರುವ 34,000 ಕೋಟಿ ಮೊತ್ತದ ಯೋಜನೆಗಳ ಹೊರತಾಗಿ 21,275 ಕೋಟಿ ಮೌಲ್ಯದ 6 ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಮೋದಿ ಸರ್ಕಾರ ಟೀಂ ಇಂಡಿಯಾ ಪರಿಕಲ್ಪನೆಯೊಂದಿಗೆ ಮುನ್ನಡೆಯುತ್ತಿದ್ದರೆ ಕೇರಳ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿ ನಲುಗುವಂತಾಗಿದೆ. ಶಾಲಾ ಮಕ್ಕಳ ಮಧ್ಯಾಹ್ನದ್ಕೂ ಅಡ್ಡಿಪಡಿಸುವ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಸಚಿವರು ವಿಧಾನಸಭೆಯಲ್ಲಿ ಸುಳ್ಳು ಅಂಕಿ ಅಂಶಗಳನ್ನು ಹೇಳುತ್ತಿದ್ದಾರೆ. ಇದಕ್ಕೆ ವಿರೋಧ ಪಕ್ಷದ ನಾಯಕರೂ ಸಹಕಾರ ನೀಡುತ್ತಿದ್ದಾರೆ. ಕೇಂದ್ರದ ಯೋಜನೆಗಳ ಬಗ್ಗೆ ಮತ್ತಷ್ಟು ಸಚಿವರು ಅವಲೋಕನ ನಡೆಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ಕೇಂದ್ರದ ನಡೆಯಿಂದ ಕಂಗಾಲಾಗಿರುವ ಎಡರಂಗ, ಸುಳ್ಳು ಪ್ರಚಾರದ ಮೂಲಕ ಜನರನ್ನು ವಂಚಿಸಲು ಯತ್ನಿಸುತ್ತಿರುವುದಾಗಿ ಸುರೇಂದ್ರನ್ ಆರೋಪಿಸಿದರು. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು, ಪ್ರಧಾನ ಕಾರ್ಯದರ್ಶಿ ಎ.ವೇಲಾಯುಧನ್, ವಿಜಯಕುಮಾರರೈ ಉಪಸ್ಥಿತರಿದ್ದರು.





