HEALTH TIPS

ತಿರುಮಲ ತಿರುಪತಿ ದೇವಸ್ಥಾನಕ್ಕೆ 'ಧರ್ಮ ರಥ' ನೀಡಿದ ಸುಧಾ ಮೂರ್ತಿ

              ಹೈದರಾಬಾದ್: ಸಾರ್ವಜನಿಕ ಹಿತಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ನೀಡುತ್ತಲೇ ಬಂದಿರುವ ಇನ್​ಫೊಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇದೀಗ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಇಂದು ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ 'ಧರ್ಮ ರಥ' ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.

               ಸುಮಾರು 42 ಲಕ್ಷ ರೂಪಾಯಿ ವೆಚ್ಚದ ಈ ಧರ್ಮ ರಥ ವಾಹನ ನೀಡಿದ ನಂತರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸುಧಾ ಮೂರ್ತಿ ಮತ್ತು ಕುಟುಂಬದ ಕೆಲವು ಸದಸ್ಯರು ವಿಶೇಷ ಪೂಜೆಯನ್ನು ಸಲ್ಲಿಸಿದರು.


                ಈ ಸಂದರ್ಭದಲ್ಲಿ ಚಿತ್ರ ನಿರ್ಮಾಪಕ ರಮೇಶ್ ರೆಡ್ಡಿ, ಸುಧಾ ಮೂರ್ತಿ ಅವರ ಸಹೋದರಿ ಹಾಗೂ ಸ್ನೇಹಿತರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆ ಎಂದು ಹೇಳಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries