ಕೊಚ್ಚಿ: ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿ ಆರು ತಿಂಗಳ ಗರ್ಭಿಣಿಯಾಗಿರುವ 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಹೊರತೆಗೆಯಲಾಗುವ ಮಗುವಿನ ಜವಾಬ್ದಾರಿಯನ್ನು ಸರ್ಕಾರವೇ ಹೊರಬೇಕು ಮತ್ತು ನಿರ್ಧಾರವನ್ನು ವಿಳಂಬ ಮಾಡುವುದರಿಂದ ಬಾಲಕಿಯ ನೋವಿನ ಪರಿಣಾಮ ಹೆಚ್ಚಾಗುತ್ತದೆ ಎಂದು ನ್ಯಾಯಾಲಯ ಸೂಚಿಸಿದೆ. ಈ ಮಹತ್ವದ ಆದೇಶವು ನ್ಯಾಯಮೂರ್ತಿ ವಿಜಿ ಅರುಣ್ ಅವರದ್ದಾಗಿದೆ.
ದೇಶದ ಕಾನೂನಿನ ಪ್ರಕಾರ, 24 ವಾರಗಳ ನಂತರ ಗರ್ಭಪಾತಕ್ಕೆ ಅವಕಾಶವಿಲ್ಲ. ಆದರೆ ನ್ಯಾಯಾಲಯದ ಈ ನಿರ್ಧಾರವು ವಿಶೇಷ ಪರಿಸ್ಥಿತಿಯನ್ನು ಆಧರಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿಯೇ ಗರ್ಭಪಾತ ಮಾಡಿಸಿ, ಮಗುವನ್ನು ಹೊರತರಲು ತಕ್ಷಣ ಕ್ರಮ ಕೈಗೊಳ್ಳಲು ವೈದ್ಯಕೀಯ ಮಂಡಳಿ ರಚಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ಹೊರ ತೆಗೆದ ಬಳಿಕ ಮಗು ಬದುಕಿದ್ದರೆ ಉತ್ತಮ ಚಿಕಿತ್ಸೆ ನೀಡಬೇಕು ಹಾಗೂ ಬಾಲಕಿ ಮಗುವನ್ನು ಪಡೆಯಲು ಪಡಿಸಿಕೊಳ್ಳಲು ಇಚ್ಛಿಸದಿದ್ದರೆ ಸರಕಾರವೇ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಕೋರ್ಟ್ ಆದೇಶಿಸಿದೆ. ಹತ್ತು ದಿನಗಳ ನಂತರ ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.