HEALTH TIPS

ಏಕರೂಪದ ವಸ್ತ್ರ ಸಂಹಿತೆ: ತುರ್ತು ವಿಚಾರಣೆಗೆ 'ಸುಪ್ರೀಂ' ನಿರಾಕರಣೆ

           ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿ ಸಂಬಂಧ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ.

         ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿನ ಬೋಧಕರು ಹಾಗೂ ವಿದ್ಯಾರ್ಥಿಗಳಿಗೆ ಏಕರೂಪದ ವಸ್ತ್ರ ಸಂಹಿತೆ ಜಾರಿಗೊಳಿಸುವ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.

            ಸಮಾನತೆ ಹಾಗೂ ದೇಶದ ಐಕ್ಯತೆಯ ದೃಷ್ಟಿಯಿಂದ ಇದು ಅಗತ್ಯ ಎಂದು ಹೇಳಿದ್ದ ಅವರು ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಮನವಿ ಮಾಡಿದ್ದರು.

            ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಹೇಳಿತು.

           'ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನಿಮಗೆ ಹಲವು ಬಾರಿ ಹೇಳಿದ್ದೇವೆ. ಈ ವಿಚಾರವಾಗಿ ಪದೇ ಪದೇ ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸಬೇಡಿ. ಎಲ್ಲವೂ ತುರ್ತಾಗಿ ಆಗಬೇಕೆಂದರೆ ಹೇಗೆ? ನಿಮ್ಮ ಸರತಿ ಬರುವವರೆಗೂ ಕಾಯಿರಿ' ಎಂದು ಪೀಠವು ಅರ್ಜಿದಾರರಿಗೆ ಸೂಚಿಸಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries