ಮಂಜೇಶ್ವರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ವ್ಯಾಪ್ತಿಯ ತಲಪಾಡಿ ವಲಯದ ಕುಂಜತ್ತೂರು, ಮಾಡ, ಪಾವೂರು, ಬಡಾಜೆ, ಮಂಜೇಶ್ವರ ಹಾಗೂ ಕಡಂಬಾರು ಒಕ್ಕೂಟಗಳ ಪದಗ್ರಹಣ ಸಮಾರಂಭ ತಲಪಾಡಿ ವಿಶ್ವಾಸ್ ಆಡಿಟೋರಿಯಂನಲ್ಲಿ ನಡೆಯಿತು.
ಸಮಾರಂಭವನ್ನು ಮಾಡ ಅರಸು ಮಂಜಿಷ್ಣಾರು ದೈವಕ್ಷೇತ್ರದ ಪಾತ್ರಿ ರಾಜ ಬೆಳ್ಚಪ್ಪಾಡ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ಅವÀರು ಆರೂ ಒಕ್ಕೂಟಗಳ ಪದಗ್ರಹಣ ನೆರವೇರಿಸಿ ಮಾರ್ಗದರ್ಶನ ಮಾಡಿದರು. ಯೋಜನೆಯ ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲಿಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಡ ಒಕ್ಕೂಟದ ಅಧ್ಯಕ್ಷೆ ಜಯಶ್ರೀ ಕಮಲಾಕ್ಷ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಸೆಮೀಮಾ ಟೀಚರ್, ಮಂಜೇಶ್ವರ ಗ್ರಾಮ ಪಂಚಾಯತಿ ಅಧ್ಯಕ್ಷೆ ಜೀನ್ ಲವೀನಾ ಮೆಂತರೊ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾಸರಗೋಡು ಜಿಲ್ಲಾಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ ಬಾಗ್, ನಿಕಟ ಪೂರ್ವ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲ್, ಜನಜಾಗೃತಿ ವೇದಿಕೆ ಸದಸ್ಯ ಹರೀಶ್ ಶೆಟ್ಟಿ ಮಾಡರವರು ಉಪಸ್ಥಿತರಿದ್ದು ಶುಭಹಾರೈಸಿದರು. ಯೋಜನೆಯ ದ.ಕ .2 ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಗೌರವ ಉಪಸ್ಥಿತಿಯಿದ್ದರು.

.jpg)
