ನವದೆಹಲಿ: ದ್ರೌಪದಿ ಮುರ್ಮು ಅವರನ್ನು ತಮ್ಮ ಕಡೆಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ಎನ್ಡಿಎ, ಇದೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನೂ ಘೋಷಣೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ.
0
samarasasudhi
ಜುಲೈ 16, 2022
ನವದೆಹಲಿ: ದ್ರೌಪದಿ ಮುರ್ಮು ಅವರನ್ನು ತಮ್ಮ ಕಡೆಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ಎನ್ಡಿಎ, ಇದೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನೂ ಘೋಷಣೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ.
ಪಶ್ಚಿಮ ಬಂಗಾಲದ ರಾಜ್ಯಪಾಲರಾಗಿರುವ ಜಗದೀಪ್ ಧನಕರ್ ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್ಡಿಎ ಕಣಕ್ಕಿಳಿಸಲಿದ್ದು, ಅವರ ಆಯ್ಕೆಯನ್ನು ಜೆ.ಪಿ. ನಡ್ಡಾ ಇಂದು ದೆಹಲಿಯಲ್ಲಿ ನಡೆದ ಸಂಸದೀಯ ಸಮಿತಿಯ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.
ಜಗದೀಪ್ ಅವರು ರೈತಪುತ್ರ, ಜನರ ರಾಜ್ಯಪಾಲರೆಂದೇ ಗುರುತಿಸಿಕೊಂಡಿರುವ ಅವರು ಎನ್ಡಿಯ ಮೈತ್ರಿಕೂಟದಿಂದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ನಡ್ಡಾ ತಿಳಿಸಿದ್ದಾರೆ.
ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಗದೀಪ್ ಅವರ ಮಧ್ಯೆ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಸಂಘರ್ಷ ಉಂಟಾಗಿವೆ.