HEALTH TIPS

ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು: ಕಾಯ್ದೆ ರೂಪಿಸಲು 'ಸುಪ್ರೀಂ' ಸೂಚನೆ

               ನವದೆಹಲಿ: 'ಕ್ರಿಮಿನಲ್‌ ಪ್ರಕರಣಗಳ ಆರೋಪಿಗಳ ಬಿಡುಗಡೆ ಪ್ರಕ್ರಿಯೆಯನ್ನು ಸರಳಗೊಳಿಸಲು, ಅವರಿಗೆ ಜಾಮೀನು ನೀಡುವ ಸಂಬಂಧ ಹೊಸದಾಗಿ ಕಾಯ್ದೆ ರೂಪಿಸಬೇಕು' ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

              ಈ ಸಂಬಂಧ ಕೆಲ ಸೂಚನೆಗಳನ್ನೂ ನೀಡಿದ ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರಿಂದ ಪೀಠವು, 'ತನಿಖಾ ಸಂಸ್ಥೆಗಳು, ಅದರ ಅಧಿಕಾರಿಗಳು ಅಪರಾಧ ದಂಡ ಸಂಹಿತೆಯ ಸೆಕ್ಷನ್‌ 41-ಎಗೆ ಬದ್ಧರಾಗಿರಬೇಕು' ಎಂದು ತಿಳಿಸಿತು.

                  ಜಾಮೀನು ಪಡೆಯಲು ಇರುವ ನಿಬಂಧನೆಗಳನ್ನು ಈಡೇರಿಸಲು ಶಕ್ತರಲ್ಲದ ವಿಚಾರಣಾಧೀನ ಕೈದಿಗಳನ್ನು ಗುರುತಿಸಿ, ಅವರ ಬಿಡುಗಡೆಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪೀಠ ಇದೇ ಸಂದರ್ಭದಲ್ಲಿ ಎಲ್ಲ ಹೈಕೋರ್ಟ್‌ಗಳಿಗೆ ನಿರ್ದೇಶಿಸಿತು.

                 ಈ ವಿಷಯಕ್ಕೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿಯನ್ನು ನಾಲ್ಕು ತಿಂಗಳಲ್ಲಿ ಸಲ್ಲಿಸಬೇಕು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೂ ಪೀಠವು ನಿರ್ದೇಶನ ನೀಡಿತು.

                     ಪ್ರಕರಣವೊಂದರ ಸಂಬಂಧ ಸಿಬಿಐ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್ ಈ ನಿರ್ದೇಶನಗಳನ್ನು ನೀಡಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries