ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಬುಧವಾರ ನಡೆದ ಎನ್‌ಕೌಂಟರ್ ಸಂದರ್ಭದಲ್ಲಿ ಇಬ್ಬರು ಉಗ್ರರು ಶರಣಾಗಿದ್ದಾರೆ.
0
samarasasudhi
ಜುಲೈ 06, 2022
ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಬುಧವಾರ ನಡೆದ ಎನ್‌ಕೌಂಟರ್ ಸಂದರ್ಭದಲ್ಲಿ ಇಬ್ಬರು ಉಗ್ರರು ಶರಣಾಗಿದ್ದಾರೆ.
ಏನಿದು ಘಟನೆ?: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಹಡಿಗಮ್‌ನಲ್ಲಿ ಇಬ್ಬರು ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭ ಸೇನಾಧಿಕಾರಿಗಳು ಉಗ್ರರ ಪೋಷಕರನ್ನು ಸ್ಥಳಕ್ಕೆ ಕರೆತಂದರು. ಶಸ್ತ್ರಾಸ್ತ್ರ ತ್ಯಜಿಸುವಂತೆ ಪೋಷಕರು ಮಾಡಿದ ಮನವಿಗೆ ಸ್ಪಂದಿಸಿದ ಉಗ್ರರು ಶರಣಾಗಿದ್ದಾರೆ.
ಶರಣಾಗಿರುವ ಉಗ್ರರಿಂದ ಬಂದೂಕು, ಶಸ್ತ್ರಾಸ್ತ್ರ ಮತ್ತು ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.